ಬೆಂಗಳೂರು,ಜು.11- ವಿಧಾನಸಭಾಧ್ಯಕ್ಷರು ಸಾಕಷ್ಟು ಕಾನೂನು ತಿಳಿದವರಾಗಿದ್ದು, ಶಾಸಕರ ರಾಜೀನಾಮೆ ವಿಚಾರವಾಗಿ ಕಾನೂನು ಪ್ರಕಾರ ಕ್ರಮ ಜರುಗಿಸಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದಿಲ್ಲಿ ತಿಳಿಸಿದರು.
ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಅತೃಪ್ತ ಶಾಸಕರಿಗೆ ನಿರ್ದೇಶನ ನೀಡಿ ಸಭಾಧ್ಯಕ್ಷರನ್ನು ಭೇಟಿ ಮಾಡಲು ಸೂಚಿಸಿದೆ.ಸಭಾಧ್ಯಕ್ಷರು ಮುಂದಿನ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.
ಸಂವಿಧಾನದ ಪ್ರಕಾರ ಸಭಾಧ್ಯಕ್ಷರು ಅತೃಪ್ತ ಶಾಸಕರು ನೀಡಿರುವ ರಾಜೀನಾಮೆಯನ್ನು ಪರಿಶೀಲನೆ ಮಾಡಿ ಅವರಿಂದ ವಿವರಣೆ ಪಡೆದುಕೊಂಡು ಮುಂದಿನ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದರು.