ಬೆಂಗಳೂರು, ಜು.11-ಮೈತ್ರಿ ಸರ್ಕಾರ ಅಳಿವು-ಉಳಿವಿನ ಕುರಿತಂತೆ ಇನ್ನೂ ನಿರ್ಧಾರಗಳನ್ನು ತೆಗೆದುಕೊಂಡಿಲ್ಲ. ಶೀಘ್ರವೇ ನಿರ್ಧಾರ ತೆಗೆದುಕೊಂಡು ಪ್ರಕಟಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದ್ದಾರೆ.
ಕುಮಾರಕೃಪಾ ಅತಿಥಿ ಗೃಹದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೇ ನೀಡುವ ನಿರ್ಧಾರ ತೆಗೆದುಕೊಂಡಿದ್ದಾರೆಯೇ ಎಂಬ ಪ್ರಶ್ನೆಗೆ ಈವರೆಗೂ ಅಂತಹ ಯಾವ ನಿರ್ಧಾರ ತೆಗೆದುಕೊಂಡಿಲ್ಲ. ಮುಂದಿನ ದಿನಗಳಲ್ಲಿ ಯಾವ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂಬುದನ್ನು ತಿಳಿಸುತ್ತೇವೆ ಎಂದು ಹೇಳಿದರು.