ಬೆಂಗಳೂರು, ಜು.11- ಕ್ಷಿಪ್ರ ರಾಜಕೀಯ ಬೆಳವಣಿಗೆ, ಆಡಳಿತ ಪಕ್ಷದ ಶಾಸಕರಿಂದ ಸಾಲು ಸಾಲು ರಾಜೀನಾಮೆ, ಕಾಂಗ್ರೆಸ್ ಹಾಗೂ ಬಿಜೆಪಿ ಶಾಸಕರ ಪ್ರತಿಭಟನೆ ಹಿನ್ನೆಲೆಯಲ್ಲಿ ವಿಧಾನಸೌಧ ಹಾಗೂ ವಿಕಾಸಸೌಧದ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.
ಇಂದು ಸಚಿವ ಸಂಪುಟ ಸಭೆ ನಡೆಯುತ್ತಿರುವುದರಿಂದ ಮತ್ತು ಸಂಜೆ ಅತೃಪ್ತ ಶಾಸಕರು ಸ್ಪೀಕರ್ ಮುಂದೆ ಹಾಜರಾಗಲು ಬರುತ್ತಿರುವ ಹಿನ್ನೆಲೆಯಲ್ಲಿ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ.
ಐದು ಮಂದಿ ಡಿಸಿಪಿಗಳು, 10 ಮಂದಿ ಎಸಿಪಿ, ಇನ್ಸ್ಪೆಕ್ಟರ್ಗಳು, ಸಬ್ಇನ್ಸ್ಪೆಕ್ಟರ್ಗಳು ಮತ್ತು ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
ಎರಡೂ ಶಕ್ತಿ ಸೌಧಗಳಿಗೆ ಪೆÇಲೀಸರ ಸರ್ಪಗಾವಲು ಹಾಕಲಾಗಿದೆ.ನಿನ್ನೆ ಸಂಜೆ ಶಾಸಕ ಸ್ಥಾನಕ್ಕೆ ಡಾ.ಸುಧಾಕರ್ ರಾಜೀನಾಮೆ ನೀಡಿದ ನಂತರ ಸುಧಾಕರ್ ಅವರನ್ನು ಕೂಡಿ ಹಾಕಲಾಗಿದೆ ಎಂದು ಆರೋಪಿಸಿ ಬಿಜೆಪಿ ವಿಧಾನಸೌಧದಲ್ಲಿ ಕೆಲ ಕಾಲ ಪ್ರತಿಭಟನೆ ನಡೆಸಿತ್ತು.
ಶಾಸಕರ ರಾಜೀನಾಮೆ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಆರೋಪಿಸಿ ಕಾಂಗ್ರೆಸ್ ಪ್ರತಿಯಾಗಿ ಪ್ರತಿಭಟನೆ ನಡೆಸಿತ್ತು. ಇದರಿಂದ ವಿಧಾನಸೌಧದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಹೀಗಾಗಿ ಎಲ್ಲಾ ಗೇಟು, ದ್ವಾರಗಳಲ್ಲಿ ಬಿಗಿ ಪೆÇಲೀಸ್ ಭದ್ರತೆ ಮಾಡಲಾಗಿದೆ.ಪ್ರತಿಯೊಬ್ಬರನ್ನೂ ತಪಾಸಣೆ ನಡೆಸಲಾಯಿತು.ಗುರುತಿನ ಚೀಟಿ ಇದ್ದವರಿಗೆ ಮಾತ್ರ ಒಳ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.
ನಾಳೆಯಿಂದ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಆರಂಭವಾಗಲಿದ್ದು, ಆ ಹಿನ್ನೆಲೆಯಲ್ಲೂ ಕೂಡ ಭದ್ರತಾ ಸಿಬ್ಬಂದಿಯನ್ನು ಹೆಚ್ಚಿಸಲಾಗಿದೆ.
ವಿಧಾನಸೌಧ ಸುತ್ತ ನಿಷೇಧಾಜ್ಞೆ ಜಾರಿ:
ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವಿದ್ಯಮಾನಗಳ ಸಂಬಂಧ ಇಂದಿನಿಂದ ಜು.14ರ ವರೆಗೆ ವಿಧಾನಸೌಧದ ಸbದುತ್ತಮುತ್ತ ನಿಷೇಧಾಜ್ಞೆ ಜಾರಿಮಾಡಲಾಗಿದೆ.
ವಿಧಾನಸೌಧದ ಬಳಿ ಮತ್ತು ಹೊರಭಾಗಗಳಲ್ಲಿ ಇತರೆ ರಾಜಕೀಯ ಪಕ್ಷಗಳ ಮುಖಂಡರು, ಅವರ ಅನುಯಾಯಿಗಳು ಮತ್ತು ಕಾರ್ಯಕರ್ತರುಗಳಿಂದ ಪ್ರತಿಭಟನೆ, ಧರಣಿ, ಸತ್ಯಾಗ್ರಹಗಳಂತಹ ಕಾರ್ಯಕ್ರಮಗಳು ಮತ್ತು ಕಾರ್ಯಕರ್ತರ ಮಧ್ಯೆ ಘರ್ಷಣೆ ಉಂಟಾಗುವ ಸಾಧ್ಯತೆಗಳಿವೆ.
ಈ ಹಿನ್ನೆಲೆಯಲ್ಲಿ ವಿಧಾನಸೌಧದ ಕಚೇರಿಗಳ ದೈನಂದಿನ ಕಾರ್ಯಕಲಾಪಗಳಿಗೆ ಅಡಚಣೆ ಉಂಟಾಗುವುದಲ್ಲದೆ, ಸಾರ್ವಜನಿಕ ನೆಮ್ಮದಿಗೆ ಭಂಗ ಹಾಗೂ ಸುಗಮ ಸಂಚಾರಕ್ಕೆ ತೊಂದರೆಯಾಗಬಹುದಾದ ಸಾಧ್ಯತೆಗಳಿರುವುದರಿಂದ ನಗರ ಪೆÇಲೀಸ್ ಆಯುಕ್ತ ಅಲೋಕ್ಕುಮಾರ್ ಅವರು ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.
ಈ ದಿಸೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಇಂದಿನಿಂದ 14ರ ವರೆಗೆ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ವಿಧಾನಸೌಧದ ಕಟ್ಟಡದ ಸುತ್ತಲೂ 2ಕಿಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.