ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ-ಶಾಸಕ ವಿ.ಮುನಿಯಪ್ಪ

ಬೆಂಗಳೂರು, ಜು. 13- ಯಾವುದೇ ಕಾರಣಕ್ಕೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಏನೇ ಆದರೂ ಕೂಡ ಪಕ್ಷದಲ್ಲೇ ಇರುತ್ತೇನೆ ಎಂದು ಕಾಂಗ್ರೆಸ್ ಪಕ್ಷದ ಶಾಸಕ ವಿ.ಮುನಿಯಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನಿಂದ 6ಭಾರಿ ಶಾಸಕನಾಗಿದ್ದು, ಕಾಂಗ್ರೆಸ್ ಪಕ್ಷ 9ಭಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡಿದೆ. ಹಾಗಾಗಿ ನಾನು ಎಲ್ಲೂ ಹೋಗುವುದಿಲ್ಲ ಎಂದು ಹೇಳಿದರು.
ಮುಂಬೈನಲ್ಲಿ ಬೀಡು ಬಿಟ್ಟಿರುವ ಶಾಸಕರು ಬಂದರೂ ಬರಬಹುದು ಅಥವಾ ಬಾರದೆಯೂ ಇರಬಹುದು.
ಖಾಸಗಿ ಹೋಟೆಲ್‍ನಲ್ಲಿರುವ ನಮ್ಮ ಸ್ನೇಹಿತರನ್ನು ಭೇಟಿಯಾಗಿ ಮಾತನಾಡಿಸಲು ಬಂದಿದ್ದೆ, ಶಾಸಕರೆಲ್ಲರೂ ವಿಶ್ರಾಂತಿ ಪಡೆಯುತ್ತಿದ್ದಾರೆ. ಹೀಗಾಗಿ ಮಾತನಾಡಿಸಲಾಗಲಿಲ್ಲ. ರಾಜ್ಯ ರಾಜಕೀಯದಲ್ಲಿ ಏನಾಗುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ವಿ.ಮುನಿಯಪ್ಪ ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ