ಬೆಂಗಳೂರು, ಜು.14-ಈವರೆಗೂ ತೆರೆಮರೆಯಲ್ಲಿ ಕಾರ್ಯಾಚರಣೆ ಮಾಡುತ್ತಿದ್ದ ಬಿಜೆಪಿ ಈಗ ನೇರವಾಗಿ ಅತೃಪ್ತರ ಜೊತೆ ಕಾಣಿಸಿಕೊಳ್ಳುವ ಮೂಲಕ ಸಮ್ಮಿಶ್ರ ಸರ್ಕಾರದ ವಿರುದ್ಧ ಸಮರ ಸಾರಿದೆ.
ಶಾಸಕರ ರಾಜೀನಾಮೆಗೂ, ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಈವರೆಗೂ ವಾದಿಸಲಾಗುತ್ತಿತ್ತು. ಇಂದು ಬಿಜೆಪಿಯ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಂ.ಟಿ.ಬಿ.ನಾಗರಾಜ್ ಅವರ ಜೊತೆ ಒಂದೇ ವಿಮಾನದಲ್ಲಿ ಮುಂಬೈಗೆ ಪ್ರಯಾಣಿಸಿದ್ದಾರೆ.
ಮುಂಬೈನಲ್ಲಿ ಬೀಡುಬಿಟ್ಟಿರುವ ಅತೃಪ್ತರ ಜೊತೆ ಅಶೋಕ್ ಸಭೆ ನಡೆಸಿರುವ ಮಾಹಿತಿ ಇದೆ.ಈ ಮೂಲಕ ಈವರೆಗೂ ತೆರೆಮರೆಯಲ್ಲಿ ನಡೆಯುತ್ತಿದ್ದ ಕಸರತ್ತು ನೇರವಾಗಿ ಕಾಣಿಸಿಕೊಳ್ಳಲಾರಂಭಿಸಿದೆ.
ಕಾಂಗ್ರೆಸ್ ನಾಯಕರು ಅತೃಪ್ತರ ಜೊತೆ ಬಿಜೆಪಿ ನಾಯಕರು ಕಾಣಿಸಿಕೊಳ್ಳುತ್ತಿರುವ ದೃಶ್ಯಾವಳಿಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ಸಾಕ್ಷ್ಯ ಒದಗಿಸಲು ಎಲ್ಲಾ ರೀತಿಯ ತಯಾರಿ ನಡೆಸುತ್ತಿದ್ದಾರೆ.