ನಾಳೆ ಸ್ಪೀಕರ್ ರಮೇಶ್‍ಕುಮಾರ್ ಅವರನ್ನು ಭೇಟಿಯಾಗಲಿರುವ ರಾಮಲಿಂಗರೆಡ್ಡಿ

ಬೆಂಗಳೂರು, ಜು.14- ನಾಳೆ ವಿಧಾನಸಭೆಗೆ ಹಾಜರಾಗುವುದಲ್ಲದೆ ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ಅವರನ್ನು ಭೇಟಿಯಾಗುವುದಾಗಿ ಮಾಜಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಚಾರದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ರಾಜಿನಾಮೆ ವಾಪಸ್ ತೆಗೆದುಕೊಳ್ಳಬೇಕೋ, ಬೇಡವೋ ಎಂಬ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ ಎಂದರು.

ರಾಜೀನಾಮೆಯನ್ನು ವಾಪಸ್ ಪಡೆಯದಂತೆ ಬಿಜೆಪಿಯ ನಾಯಕರು ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ. ಎಲ್ಲಾ ಪಕ್ಷಗಳಲ್ಲೂ ನನಗೆ ಸ್ನೇಹಿತರಿದ್ದಾರೆ. ಎಲ್ಲರೂ ಭೇಟಿಯಾಗುತ್ತಾರೆ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದು ತಿಳಿಸಿದರು.

ತಮ್ಮ ಪುತ್ರಿ ಹಾಗೂ ಶಾಸಕಿ ಸೌಮ್ಯಾರೆಡ್ಡಿ ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳಲು ಅವರು ಸಮರ್ಥರಾಗಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ಪ್ರತಿಕ್ರಿಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ