ಭಾರೀ ಕುತೂಹಲ ಕೆರಳಿಸಿರುವ ನಾಳಿನ ಸದನದ ಕಲಾಪ

ಬೆಂಗಳೂರು, ಜು.14– ರಾಜೀನಾಮೆ ನೀಡಿರುವ ಆಡಳಿತ ಪಕ್ಷದ ಶಾಸಕರ ಮನವೊಲಿಕೆ ಪ್ರಯತ್ನಗಳು ಫಲ ನೀಡದೆ ಅತೃಪ್ತ ಶಾಸಕರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಳೆಯೇ ವಿಶ್ವಾಸಮತ ಸಾಬೀತುಪಡಿಸುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಆಗ್ರಹಿಸಿ ವಿಧಾನಸಭೆಯಲ್ಲಿ ಬಿಜೆಪಿ ಪಟ್ಟು ಹಿಡಿಯುವ ಸಾಧ್ಯತೆಗಳು ಹೆಚ್ಚಾಗಿವೆ.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಈಗಾಗಲೇ ವಿಶ್ವಾಸಮತ ಸಾಬೀತುಪಡಿಸಲು ಸಭಾಧ್ಯಕ್ಷರ ಸಮಯಾವಕಾಶ ಕೋರಿದ್ದಾರೆ.ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ದಿನದಿಂದ ದಿನಕ್ಕೆ ಶಾಸಕರ ವಿಶ್ವಾಸ ಕಳೆದುಕೊಳ್ಳುತ್ತಿದ್ದು, ಅಲ್ಪಮತಕ್ಕೆ ಕುಸಿಯುತ್ತಿದೆ.

ಹೀಗಾಗಿ ದಿನಗಳನ್ನು ಮುಂದೂಡದೆ ನಾಳೆಯೇ ವಿಶ್ವಾಸಮತ ಸಾಬೀತುಪಡಿಸಬೇಕೆಂದು ಬಿಜೆಪಿ ಪಟ್ಟು ಹಿಡಿಯಲಿದೆ.

ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿ ಸಿಎಂ ರಾಜೀನಾಮೆ ಪಡೆಯಲು ಬಿಜೆಪಿ ಪ್ರಯತ್ನ ನಡೆಸುತ್ತಿದ್ದು, ಇದರ ಭಾಗವಾಗಿ ನಾಳೆ ಸದನದಲ್ಲೇ ಹೋರಾಟ ನಡೆಸಲು ತೀರ್ಮಾನಿಸಿದೆ.

ಒಟ್ಟಾರೆ ನಾಳಿನ ಸದನದ ಕಲಾಪ ಭಾರೀ ಕುತೂಹಲ ಕೆರಳಿಸಿದ್ದು, ಮುಂದೇನಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ