ಬೆಂಗಳೂರು, ಜು. 14– ಯಾವ ಕಾರಣಕ್ಕೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಮಾಧ್ಯಮಗಳಲ್ಲಿ ಬರುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದ ವಿಚಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಬಿಜೆಪಿಗೆ ಬರುತ್ತಾರೆ ಎನ್ನುವ ಬಗ್ಗೆ ಸುದ್ದಿ ಬರುತ್ತಿದೆ ನಮಗೆ ತಲೆಕೆಟ್ಟಿದೆ ಏನು ?ಅವರ ವಿರುದ್ಧವೇ ಎಲ್ಲರೂ ತಿರುಗಿಬಿದ್ದು ಬಾಂಬೆಗೆ ಹೋಗಿದ್ದಾರೆ, ಯಾವ ಕಾರಣಕ್ಕೂ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಪ್ರಶ್ನೆ ಉದ್ಭವವಾಗುವುದಿಲ್ಲ ಆ ಗೊಂದಲವನ್ನು ಅವರು ಮಾಡಿಕೊಳ್ಳಬಾರದು ನಾವು ಮಾಡಿಕೊಳ್ಳುವ ಪ್ರಶ್ನೆ ಇಲ್ಲ ಎಂದರು.
ಅವರು ಬಿಜೆಪಿಗೆ ಬರುತ್ತೇನೆ ಎಂದು ಹೇಳಿಲ್ಲ ಅನಗತ್ಯವಾಗಿ ಅವರ ಹೆಸರು ಪ್ರಸ್ತಾಪ ಮಾಡುತ್ತಿದ್ದಾರೆ ಯಾವ ಕಾರಣಕ್ಕೂ ಅವರು ಬಿಜೆಪಿಗೆ ಬರಲ್ಲ ಎಂದು ಬಿಎಸ್ವೈ ಸ್ಪಷ್ಟಪಡಿಸಿದರು.
ಈಗ ರೆಸಾರ್ಟಗೆ ಹೋಗಿ ಬರುತ್ತೇನೆ ನಂತರ ರಾಜಕೀಯ ವಿದ್ಯಮಾನಗಳನ್ನು ಗಮನಿಸಿ ಮುಂದೇನು ಮಾಡಬೇಕು ಎಂದು ನಿರ್ಧಾರ ಕೈಗೊಳ್ಳುತ್ತೇನೆ ಎಂದು ಬಿಎಸ್ವೈ ಸ್ಪಷ್ಟಪಡಿಸಿದರು.