ರೋಷನ್‍ಬೇಗ್ ಅವರಿಗೆ ಪರೋಕ್ಷವಾಗಿ ಸಹಾಯ ಮಾಡುತ್ತಿರುವ ಬಿಜೆಪಿ

ಬೆಂಗಳೂರು, ಜು.16-ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಬಿಜೆಪಿ ಮುಖಂಡರು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ವಿಶೇಷ ತನಿಖಾದಳದ ಅಧಿಕಾರಿಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಸಚಿವ ರೋಷನ್‍ಬೇಗ್ ಅವರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಸಂತೋಷ್ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಜೊತೆಗಿದ್ದರು.

ಎಸ್‍ಐಟಿ ಅಧಿಕಾರಿಗಳನ್ನು ನೋಡಿದ ತಕ್ಷಣವೇ ಸಂತೋಷ್ ಅಲ್ಲಿಂದ ಪರಾರಿಯಾಗಿದ್ದಾರೆ. ಇದನ್ನು ಗಮನಿಸಿದರೆ ಬಿಜೆಪಿ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಕುದುರೆ ವ್ಯಾಪಾರ ನಡೆಸುತ್ತಿದೆ ಮುಖ್ಯಮಂತ್ರಿ ಟ್ವೀಟರ್‍ನಲ್ಲಿ ಆರೋಪಿಸಿದ್ದಾರೆ.

ಬಹುಕೋಟಿ ವಂಚನೆಯ ಐಎಂಎ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ರೋಷನ್‍ಬೇಗ್ ಅವರಿಗೆ ಪರೋಕ್ಷವಾಗಿ ಸಹಾಯಮಾಡುತ್ತಿದ್ದ ಬಿಜೆಪಿಯ ಬಣ್ಣ ಬಯಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ