ದುಡುಕಿನ ನಿರ್ಧಾರದಿಂದ ರಾಜಕೀಯ ಭವಿಷ್ಯವನ್ನು ಹಾಳುಮಾಡಿಕೊಳ್ಳಬೇಡಿ-ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಜು.17-ರಾಜೀನಾಮೆ ನೀಡಿ ಮುಂಬೈನಲ್ಲಿರುವ ಜೆಡಿಎಸ್-ಕಾಂಗ್ರೆಸ್ ಶಾಸಕರು ರಾಜಕೀಯ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳುವಂತೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.

ಸುಪ್ರೀಂಕೋರ್ಟ್ ತೀರ್ಪು ಹೊರಬಿದ್ದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆಯವರನ್ನು ನಂಬಿ ಹೋಗಬೇಡಿ. ಅವರು ನಿಮ್ಮ ಮೇಲೆ ಮಂಗನ ಟೋಪಿ ಹಾಕುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ನಿಮ್ಮನ್ನು ಗೆಲ್ಲಿಸಿರುವ ಜನರನ್ನು ನೋಡಿ, ನಿಮ್ಮ ಕುಟುಂಬವನ್ನು ನೋಡಿ. ರಾಜಕೀಯ ಭವಿಷ್ಯದ ಬಗ್ಗೆ ಯೋಚನೆ ಮಾಡಿ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ.

ಸುಪ್ರೀಂಕೋರ್ಟ್‍ನ ತೀರ್ಪನ್ನು ಸಮರ್ಥಿಸಿರುವ ಡಿ.ಕೆ.ಶಿವಕುಮಾರ್, ವಿಶ್ವಾಸಮತಯಾಚನೆಗೆ ಶಾಸಕರನ್ನು ಒತ್ತಾಯ ಮಾಡುವಂತಿಲ್ಲ ಎಂದು ತಿಳಿಸಿದೆ. ಸ್ಪೀಕರ್ ಅವರ ಅಧಿಕಾರ ವ್ಯಾಪ್ತಿಯನ್ನು ಎತ್ತಿ ಹಿಡಿದಿದೆ ಎಂದು ತಿಳಿಸಿದರು.

ಶಾಸಕರು ತಮ್ಮನ್ನು ನಂಬಿದ ಪಕ್ಷವನ್ನು ಗಮನದಲ್ಲಿಟ್ಟುಕೊಳ್ಳಬೇಕು. ಅನಗತ್ಯವಾಗಿ ಅನರ್ಹತೆಯ ಅಸ್ತ್ರಕ್ಕೆ ಬಲಿಯಾಗಬಾರದು. ಕಾನೂನಿನ ಪ್ರಕಾರ ಅನರ್ಹಗೊಂಡರೆ ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವವರೆಗೂ ಅವರು ಸಚಿವರಾಗಲು ಅವಕಾಶ ಇಲ್ಲ. ದುಡುಕಿನ ನಿರ್ಧಾರದಿಂದ ರಾಜಕೀಯ ಭವಿಷ್ಯ ಹಾಳು ಮಾಡಿಕೊಳ್ಳಬೇಡಿ ಎಂದು ಸಲಹೆ ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ