ಸುಪ್ರೀಂಕೋರ್ಟ್ ತೀರ್ಪಿನಲ್ಲಿ ಸ್ಪೀಕರ್‍ರವರ ಅಧಿಕಾರವನ್ನು ಎತ್ತಿ ಹಿಡಿದಿರುವುದು ಸ್ವಾಗತಾರ್ಹ-ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ

ಬೆಂಗಳೂರು, ಜು.17- ಶಾಸಕರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಲ್ಲಿ ವಿಧಾನಸಭಾಧ್ಯಕ್ಷರ ಅಧಿಕಾರವನ್ನು ಎತ್ತಿ ಹಿಡಿದಿರುವುದು ಸ್ವಾಗತಾರ್ಹ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀಂಕೋರ್ಟ್ ತೀರ್ಪಿನ ಪೂರ್ಣ ಮಾಹಿತಿ ಇಲ್ಲ. ಹೀಗಾಗಿ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ. ವಿಧಾನಸಭೆ ಸದಸ್ಯರಾದವರು ವಿಧಾನಸಭೆ ಅಧಿವೇಶನದಲ್ಲಿ ಪಾಲ್ಗೊಳ್ಳಬೇಕು ಎಂಬುದು ತಮ್ಮ ಅಭಿಪ್ರಾಯ ಎಂದರು.

ಪ್ರಸಕ್ತ ರಾಜಕೀಯ ಬೆಳವಣಿಗೆಗಳು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸಮತ ಕೋರುತ್ತಿರುವುದು ಹಾಗೂ ಪಕ್ಷದ ಮುಂದಿನ ನಿರ್ಧಾರದ ಬಗ್ಗೆ ತಮ್ಮ ಶಾಸಕರು ಹಾಗೂ ನಾಯಕರೊಂದಿಗೆ ಸಮಾಲೋಚನೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ