ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ-ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು,ಜು.17- ಅತೃಪ್ತ ಶಾಸಕರ ರಾಜೀನಾಮೆ ಅರ್ಜಿ ಅಂಗೀಕಾರ ಕುರಿತು ಸುಪ್ರೀಂಕೋರ್ಟ್ ನೀಡಿರುವ ಮಹತ್ವದ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಐತಿಹಾಸಿಕ ತೀರ್ಪು ನೀಡುವ ಮೂಲಕ ನ್ಯಾಯಾಲಯ ಅತೃಪ್ತ ಶಾಸಕರ ನೈತಿಕತೆಯನ್ನು ಎತ್ತಿಹಿಡಿದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್- ಜೆಡಿಎಸ್‍ನ 15 ಮಂದಿ ಶಾಸಕರ ರಾಜೀನಾಮೆಯನ್ನು ವಿಧಾನಸಭೆಯ ಸ್ಪೀಕರ್ ತೀರ್ಮಾನಿಸಬೇಕೆಂದು ತೀರ್ಪು ನೀಡಿರುವ ಸುಪ್ರೀಂಕೋರ್ಟ್, ನಾಳೆ ಅಧಿವೇಶನದಲ್ಲಿ ಪಾಲ್ಗೊಳ್ಳಲು ಭಿನ್ನಮತೀಯರಿಗೆ ವಿಪ್ ಜಾರಿ ಹಾಗೂ ಒತ್ತಾಯ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ.

ಸುದ್ದಿಗಾರರೊಂದಿಗೆ ಈ ಕುರಿತು ಪ್ರತಿಕ್ರಿಯಿಸಿರುವ ಬಿ.ಎಸ್.ಯಡಿಯೂರಪ್ಪ, ಮಹತ್ವದ ತೀರ್ಪು ನೀಡುವ ಮೂಲಕ ಸುಪ್ರೀಂಕೋರ್ಟ್ ಅತೃಪ್ತ ಶಾಸಕರ ನೈತಿಕತೆಯನ್ನು ಎತ್ತಿಹಿಡಿದಿದೆ ಎಂದರು.

ಸ್ಪೀಕರ್ ಅವರಿಗೆ ಸುಪ್ರೀಂಕೋರ್ಟ್ ಯಾವುದೇ ಕಾಲಮಿತಿ ನೀಡದಿದ್ದರೂ ಶೀಘ್ರದಲ್ಲಿ ಅತೃಪ್ತರ ರಾಜೀನಾಮೆ ಅರ್ಜಿಯನ್ನು ವಿಚಾರಣೆ ನಡೆಸಿ ನಿರ್ಧಾರ ಕೈಗೊಳ್ಳಬೇಕು ಎಂದು ಸೂಚನೆ ನೀಡಿದೆ. ಹೀಗಾಗಿ ಸ್ಪೀಕರ್ ರಮೇಶ್‍ಕುಮಾರ್ ಅವರು ಶೀಘ್ರದಲ್ಲಿ ರಾಜೀನಾಮೆಯನ್ನು ಅಂಗೀಕಾರ ಮಾಡಬೇಕಿದೆ ಎಂದು ಹೇಳಿದರು.

ಅಲ್ಲದೆ ಸುಪ್ರೀಂಕೋರ್ಟ್‍ನ ತೀರ್ಪು ಸಂವಿಧಾನದ ಆಶಯಗಳನ್ನು ಎತ್ತಿಹಿಡಿದಿದೆ ಎಂದು ಪ್ರಶಂಶಿಸಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ