ಬೆಂಗಳೂರು, ಜು.18-ಶಾಸಕರಿಗೆ ಆಯಾ ಪಕ್ಷದ ನಾಯಕರು ವಿಪ್ ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ ಎಂದು ಹೇಳಿ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಇಕ್ಕಟ್ಟಿಗೆ ಸಿಲುಕಿದ್ದಲ್ಲದೆ, ತಕ್ಷಣವೇ ತಮ್ಮ ಹೇಳಿಕೆ ಹಿಂಪಡೆದ ಪ್ರಸಂಗ ನಡೆಯಿತು.
ವಿಧಾನಸಭೆಯಲ್ಲಿ ಸುಪ್ರೀಂಕೋರ್ಟ್ ತೀರ್ಪಿನ ಮೇಲೆ ಚರ್ಚೆ ನಡೆಯುತ್ತಿದ್ದಾಗ ಮಧ್ಯ ಪ್ರವೇಶ ಮಾಡಿದ ಯಡಿಯೂರಪ್ಪ ಅವರು, ವಿಪ್ ನೀಡುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ ಎಂದು ಹೇಳಿದರು.
ಅದಕ್ಕೆ ಆಡಳಿತ ಪಕ್ಷದಿಂದ ಸಚಿವ ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ, ಆರ್.ವಿ.ದೇಶಪಾಂಡೆ ಸೇರಿದಂತೆ ಎಲ್ಲ ಸಚಿವರು, ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆ, ಏರಿದ ಧ್ವನಿಯಲ್ಲಿ ಯಡಿಯೂರಪ್ಪ ವಿರುದ್ಧ ಹರಿಹಾಯ್ದು, ಯಡಿಯೂರಪ್ಪ ಸದನವನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದಾಗ ಯಡಿಯೂರಪ್ಪ ಸುಮ್ಮನೆ ಕುಳಿತುಕೊಂಡರು.
ನಂತರ ನಾನು ನನ್ನ ಹೇಳಿಕೆಗಳನ್ನು ಹಿಂಪಡೆಯುತ್ತೇನೆ. ಕಾಂಗ್ರೆಸ್ ಪಕ್ಷ ಬೇಕಿದ್ದರೆ ತನ್ನ ಶಾಸಕರಿಗೆ ವಿಪ್ ಜಾರಿ ಮಾಡಲಿ.ನನ್ನ ಅಭ್ಯಂತರ ಇಲ್ಲ ಎಂದು ಹೇಳಿದರು.