ಐಸಿಜೆ ತೀರ್ಪನ್ನು ಸ್ವಾಗತಿಸಿದ ಪ್ರಧಾನಿ ಮೋದಿ

ನವದೆಹಲಿ, ಜು.18– ಬೇಹುಗಾರಿಕೆ ಆರೋಪದ ಮೇರೆಗೆ ಪಾಕಿಸ್ತಾನ ಬಂಧಿಸಿದ್ದ ಭಾರತದ ನಿವೃತ್ತ ನೌಕಾಧಿಕಾರಿ ಕುಲಭೂಷಣ್ ಜಾಧವ್ ಅವರ ಗಲ್ಲು ಶಿಕ್ಷೆಯನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ತಡೆ ನೀಡಿದ್ದು, ಐಸಿಜೆ ತೀರ್ಪಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸ್ವಾಗತಿಸಿದ್ದಾರೆ.

ಪಾಕಿಸ್ತಾನದಲ್ಲಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆ ಎದುರಿಸುತ್ತಿದ್ದ ಜಾಧವ್ ಮರಣದಂಡನೆ ಶಿಕ್ಷೆಯನ್ನು ತಡೆ ನೀಡಿದೆ. ಅಂತಾರಾಷ್ಟ್ರೀಯ ಕೋರ್ಟ್ ಆದೇಶಕ್ಕೆ ದೇಶದಾದ್ಯಂತ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜಕೀಯ ಗಣ್ಯರು ತೀರ್ಪನ್ನು ಸ್ವಾಗತಿಸಿದ್ದಾರೆ.

ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ನಾಯಕರು, ಐಸಿಜೆ ತೀರ್ಪು ನ್ಯಾಯದ ಪರವಾಗಿದೆ ಎಂದು ಹೇಳಿದ್ದಾರೆ. ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಇದು ನ್ಯಾಯ ಮತ್ತು ಸತ್ಯಕ್ಕೆ ಸಂದ ಜಯ ಎಂದಿದ್ದಾರೆ.

ಪ್ರಕರಣದಲ್ಲಿ ಜಾಧವ್‍ಗೆ ಖಂಡಿತಾ ನ್ಯಾಯ ದೊರೆಯಲಿದೆ ಎಂದು ವಿಶ್ವಾಸ ಮೋದಿ ವ್ಯಕ್ತಪಡಿಸಿದ್ದಾರೆ. ಕೇಂದ್ರದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜï ಅವರು ಟ್ವೀಟ್‍ನಲ್ಲಿ ಐಸಿಜೆ ತೀರ್ಪಿನಿಂದಾಗಿ ಕುಲಭೂಷಣ್ ಜಾಧವ್ ಕುಟುಂಬಸ್ಥರಿಗೆ ನೆಮ್ಮದಿ ದೊರೆದಂತಾಗಿದೆ. ಪ್ರಕರಣದಲ್ಲಿ ದೇಶಕ್ಕೆ ಖಂಡಿತಾ ನ್ಯಾಯ ದೊರೆಯಲಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿ, ಐಸಿಜೆ ತೀರ್ಪು ಸತ್ಯ ಮತ್ತು ಮಾನವೀಯತೆ ಘನತೆಗೆ ದೊರೆತ ಗೆಲುವು. ಮೋದಿ ಸರ್ಕಾರದ ರಾಜತಾಂತ್ರಿಕತೆಗೆ ಸಂದ ಜಯವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ