ವಿಶ್ವಾಸಮತಯಾಚನೆ ಹಿನ್ನಲೆ ವಿಧಾನಸೌಧಕ್ಕೆ ಪೊಲೀಸ್ ಸರ್ಪಗಾವಲು

ಬೆಂಗಳೂರು, ಜು.18-ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ವಿಧಾನಸೌಧದ ಸುತ್ತಮುತ್ತಲು ಪೊಲೀಸ್ ಬಂದೋಬಸ್ತ್ ಹೆಚ್ಚಳ ಮಾಡಲಾಗಿದೆ. ವಿಧಾನಸೌಧ ಪ್ರವೇಶಿಸುವ ಎಲ್ಲಾ ಗೇಟ್‍ಗಳು ಹಾಗೂ ವಿಧಾನಸೌಧದ ದ್ವಾರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ವಿಧಾನಸೌಧಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗಿದೆ. ಕೆಎಸ್‍ಆರ್‍ಪಿ, ಸಿಎಆರ್ ತುಕಡಿಗಳು, ಕ್ಷಿಪ್ರ ಕಾರ್ಯಾಚರಣೆ ಪಡೆ, ವಾಟರ್‍ಜೆಟ್‍ಗಳನ್ನು ಕೂಡ ನಿಯೋಜಿಸಲಾಗಿದ್ದು, ವಿಧಾನಸೌಧದ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿರುವ ಪೊಲೀಸರು ಭಾರೀ ಭದ್ರತೆಯನ್ನು ಒದಗಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ