ಸುಪ್ರೀಂಕೋರ್ಟ್ ತೀರ್ಪಿನಿಂದ ರಾಜ್ಯ ರಾಜಕೀಯದಲ್ಲಿ ಗೊಂದಲ ಸೃಷ್ಟಿ

ಬೆಂಗಳೂರು, ಜು.19- ರಾಜ್ಯ ರಾಜಕೀಯ ಬೆಳವಣಿಗೆ ಬಗ್ಗೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಿಂದ ಗೊಂದಲ ಸೃಷ್ಟಿಮಾಡಿದೆ ಎಂದು ಭಾರತ್ ಕಮ್ಯುನಿಸ್ಟ್ ಪಕ್ಷದ ರಾಷ್ಟ್ರೀಯ ಮಂಡಳಿ ಸದಸ್ಯ ಡಾ.ಸಿದ್ದನಗೌಡ ಪಾಟೀಲ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಚಿಹ್ನೆಯಿಂದ ಗೆದ್ದ ಶಾಸಕರುಗಳಿಗೆ ವಿಪ್ ನೀಡುವ ಹಕ್ಕು ಪಕ್ಷಕ್ಕೆ ಇರುತ್ತದೆ.ಆದರೆ, ಸುಪ್ರೀಂಕೋರ್ಟ್ ನೀಡಿರುವ ಈ ತೀರ್ಪಿನಿಂದ ಈ ಹಕ್ಕು ಮೊಟಕಾಗಿದೆ ಎಂದು ಹೇಳಿದರು.

ಮೂಲಭೂತ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಬೇಕಾದ ಶಾಸಕರು ರೆಸಾರ್ಟ್ ರಾಜಕೀಯ ಮಾಡಿಕೊಂಡು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸದೆ ಮೋಜು-ಮಸ್ತಿಯಲ್ಲಿ ತೊಡಗಿಕೊಂಡಿದ್ದಾರೆ ಎಂದು ಕಿಡಿಕಾರಿದರು.
ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ ಕಾಪೆರ್Çರೇಟ್ ಸಂಸ್ಥೆಗಳ ಪರವಾಗಿದೆಯೇ ಹೊರತು ರೈತರ ಪರವಾಗಿಲ್ಲ. ರಾಜ್ಯದಿಂದ ಆಯ್ಕೆಯಾಗಿರುವ ಸಂಸದರು ರಾಜ್ಯದ ಬರದ ಕುರಿತು ಚರ್ಚೆ ನಡೆಸದೆ ಕಾಲಹರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರ ಬರ ಪರಿಹಾರ ಕಾರ್ಯಕ್ಕೆ ಮುಂದಾಗಬೇಕು. ಕೇಂದ್ರ ಸರ್ಕಾರ ಬರ ನಿರ್ವಹಣೆಗೆ ಅನುದಾನ ಹೆಚ್ಚಿಸಬೇಕೆಂದು ಡಾ.ಸಿದ್ದನಗೌಡ ಪಾಟೀಲ್ ಪಕ್ಷದ ಪರವಾಗಿ ಆಗ್ರಹಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ