ಮೈಸೂರು, ಜು.19-ಯಾರು ಕಲಾಪವನ್ನು ಹಾಳು ಮಾಡುತ್ತಿದ್ದಾರೆ ಎಂದು ಗೊತ್ತಿದೆ. ಏನೇ ಆದರೂ ಸ್ಪೀಕರ್ ನಿರ್ಣಯವೇ ಅಂತಿಮ ಎಂದು ಸಚಿವ ಎಚ್.ಡಿ.ರೇವಣ್ಣ ಇಂದಿಲ್ಲಿ ತಿಳಿಸಿದರು.
ಇಂದು ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ಚಾಮುಂಡಿಬೆಟ್ಟಕ್ಕೆ ತೆರಳಿದ್ದ ಅವರು, ಸರ್ಕಾರ ಉಳಿಸಿಕೊಳ್ಳಲು ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ಮೊರೆ ಹೋದ ಸಚಿವ ಎಚ್.ಡಿ.ರೇವಣ್ಣ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಕಾಂಗ್ರೆಸ್ ನಾಯಕರು ಸದನದಲ್ಲಿ ಸಂವಿಧಾನಬದ್ಧವಾಗಿ ಮಾತನಾಡುತ್ತಿದ್ದಾರೆ. ವಿಶ್ವಾಸ ಮತಯಾಚನೆಯನ್ನು ಮೊದಲು ನಾವೇ ಕೇಳಿದ್ದು ಎಂದರು.
ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ ಎಂದ ಅವರು, ಅಟಲ್ ಬಿಹಾರಿ ವಾಜಪೇಯಿ ಅವರು ವಿಶ್ವಾಸ ಮತಯಾಚನೆಗೆ 10 ದಿನಗಳ ಕಾಲ ತೆಗೆದುಕೊಂಡಿದ್ದರು ಎಂದು ಮತ್ತೊಂದು ಪ್ರಶ್ನೆಗೆ ಪ್ರತಿಕ್ರಿಯಿಸಿದರು.