ರಾಜ್ಯಪಾಲರ ಸೂಚನೆ ಹಿನ್ನಲೆ ಕಲಾಪದಲ್ಲಿ ವಿಶೇಷಾಧಿಕಾರಿ ಭಾಗಿ

ಬೆಂಗಳೂರು,ಜು.19- ಇಂದು ಮಧ್ಯಾಹ್ನ 1.30ರೊಳಗೆ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರು ಸೂಚನೆ ನೀಡಿರುವ ಹಿನ್ನಲೆಯಲ್ಲಿ ಕಲಾಪ ವೀಕ್ಷಣೆಗೆ ರಾಜ್ಯಪಾಲರ ವಿಶೇಷ ಅಧಿಕಾರಿಗಳು ಸದನಕ್ಕೆ ಆಗಮಿಸಿದ್ದರು.
ನಿನ್ನೆ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್‍ನ್ನು ಭೇಟಿ ಮಾಡಿ ಸದನ ಕಲಾಪದಮಾಹಿತಿ ಪಡೆದಿದ್ದ ರಾಜ್ಯಪಾಲರ ವಿಶೇಷ ಅಧಿಕಾರಿ ರಮೇಶ್ ಕಲಾಪ ವೀಕ್ಷಿಸುತ್ತಿದ್ದಾರೆ.
ರಾಜ್ಯಪಾಲರ ಸೂಚನೆ ಮೇರೆಗೆ ಕಲಾಪದಲ್ಲಿ ಭಾಗಿಯಾಗಿರುವ ವಿಶೇಷಾಧಿಕಾರಿ, ಕಲಾಪದ ಸಂಪೂರ್ಣ ಮಾಹಿತಿಯನ್ನು ರಾಜ್ಯಪಾಲರಿಗೆ ರವಾನಿಸಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ