ಆಸ್ಪತ್ರೆಯಲ್ಲಿ ದಾಖಲಾಗಿರುವ ಶಾಸಕ ಶ್ರೀಮಂತ್ ಪಾಟೀಲ್-ಮಹಾರಾಷ್ಟ್ರ ಕಾಂಗ್ರೇಸ್ ಶಾಸಕಿಯೊಬ್ಬರಿಂದ ಭೇಟಿ ಮಾಡಲು ವಿಫಲ ಯತ

ಮುಂಬೈ, ಜು.20- ಇಲ್ಲಿನ ಸೇಂಟ್ ಜಾರ್ಜ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಕಾಗವಾಡ ಕ್ಷೇತ್ರದ ಶಾಸಕ ಶ್ರೀಮಂತ್ ಪಾಟೀಲï ಅವರನ್ನು ಭೇಟಿಯಾಗಲು ಮಹಾರಾಷ್ಟ್ರದ ಕಾಂಗ್ರೆಸ್ ಶಾಸಕಿಯೊಬ್ಬರು ವಿಫಲ ಯತ್ನ ನಡೆಸಿದ ಘಟನೆ ನಡೆದಿದೆ.

ಎದೆನೋವಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿರುವ ಶ್ರೀಮಂತ್ ಪಾಟೀಲï ಅವರನ್ನು ಭೇಟಿಯಾಗಿ, ಆರೋಗ್ಯ ವಿಚಾರಿಸಿ ಮಾಹಿತಿ ಪಡೆದುಕೊಳ್ಳಲು ಮುಂಬೈನ ಬಾಂದ್ರಾ ಕ್ಷೇತ್ರದ ಶಾಸಕಿಯೂ ಆಗಿರುವ ಎಐಸಿಸಿ ಮತ್ತು ಕೆಪಿಸಿಸಿ ಉಸ್ತುವಾರಿ ಕಾರ್ಯದರ್ಶಿ ಯಶೋಮತಿ ಠಾಕೂರ್ ಬಂದಿದ್ದರು. ಆಗ ಈ ಹೈಡ್ರಾಮಾ ನಡೆದಿದೆ.

ರಾಜ್ಯ ರಾಜಕಾರಣದಲ್ಲಿ ತೀವ್ರ ಬೆಳವಣಿಗೆಗಳು ನಡೆಯುತ್ತಿರುವುದರಿಂದ ಮುಂಬೈನಲ್ಲಿರುವ ಅತೃಪ್ತ ಶಾಸಕರನ್ನು ಭೇಟಿಯಾಗಲು ಮತ್ತು ಸಂಪರ್ಕಿಸಲು ಮಹಾರಾಷ್ಟ್ರದ ಕಾಂಗ್ರೆಸ್ ನಾಯಕರು ಕೂಡ ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರೊಂದಿಗೆ ರೆಸಾರ್ಟ್‍ನಲ್ಲಿದ್ದ ಕಾಗವಾಡ ಶಾಸಕ ಶ್ರೀಮಂತ್ ಪಾಟೀಲï ಅವರು ರಾತ್ರೋರಾತ್ರಿ ರೆಸಾರ್ಟ್‍ನಿಂದ ಕಣ್ಮರೆಯಾಗಿ ಮುಂಬೈನ ಆಸ್ಪತ್ರೆಯಲ್ಲಿ ಪತ್ತೆಯಾಗಿರುವುದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು.

ಅವರನ್ನು ಅಪಹರಿಸಲಾಗಿದೆ ಎಂದು ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕರು ಆರೋಪಿಸಿದ್ದರು ಮತ್ತು ಕೆಪಿಸಿಸಿ ವತಿಯಿಂದ ಪೆÇಲೀಸರಿಗೆ ದೂರು ಕೂಡ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಪೀಕರ್‍ಗೆ ಪತ್ರ ಬರೆದಿರುವ ಶ್ರೀಮಂತ್ ಪಾಟೀಲï ಅವರು, ತಮ್ಮನ್ನು ಯಾರೂ ಅಪಹರಿಸಿಲ್ಲ. ಚೆನ್ನೈಗೆ ಬಂದಾಗ ಎದೆ ನೋವು ಉಂಟಾಗಿತ್ತು. ಪರಿಚಯದ ವೈದ್ಯರು ಮುಂಬೈಗೆ ಬರುವಂತೆ ಹೇಳಿದ್ದರಿಂದ ಅಲ್ಲಿಗೆ ಹೋಗಿ ದಾಖಲಾಗಿದ್ದೇನೆ. ಸದನದ ಉಳಿದ ಕಲಾಪಗಳಿಗೆ ಗೈರು ಹಾಜರಾಗುತ್ತೇನೆ ಎಂದು ಪತ್ರ ಮುಖೇನ ಮಾಹಿತಿ ನೀಡಿದ್ದರು.

ಪೆÇಲೀಸರಿಗೆ ನೀಡಲಾದ ದೂರು ಆಧರಿಸಿ ಬೆಂಗಳೂರಿನ ಡಿಸಿಪಿ ಸುರೇಶ್ ಅವರು ನಿನ್ನೆ ಮುಂಬೈಗೆ ತೆರಳಿ ಸ್ಥಳೀಯ ಪೆÇಲೀಸರ ನೆರವಿನೊಂದಿಗೆ ಶ್ರೀಮಂತ್ ಪಾಟೀಲ್ ಅವರನ್ನು ಭೇಟಿ ಮಾಡಿ ಹೇಳಿಕೆ ಪಡೆದು ಬಂದಿದ್ದರು.
ಅದರ ಬೆನ್ನಲ್ಲೇ ನಿನ್ನೆ ರಾತ್ರಿ ಕಾಂಗ್ರೆಸ್ ಶಾಸಕಿಯಾಗಿರುವ ಯಶೋಮತಿ ಠಾಕೂರ್ ಅವರು ಶ್ರೀಮಂತ್ ಪಾಟೀಲ್ ಅವರನ್ನು ಭೇಟಿ ಮಾಡಲು ಸೇಂಟ್ ಜಾರ್ಜ್ ಆಸ್ಪತ್ರೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಶ್ರೀಮಂತ್ ಪಾಟೀಲ್ ಅವರ ಪುತ್ರ ಶ್ರೀನಿವಾಸ್ ಪಾಟೀಲ್ ಶಾಸಕಿಯ ಪ್ರವೇಶಕ್ಕೆ ಅಡ್ಡಿಪಡಿಸಿದರು ಎನ್ನಲಾಗಿದೆ.
ಪೆÇಲೀಸರು ಒಳ ಬಿಡದೇ ಇದುದ್ದರಿಂದ ಯಶೋಮತಿ ಅವರು ಮಹಾರಾಷ್ಟ್ರ ಸರ್ಕಾರವನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ