ಬೆಂಗಳೂರು,ಜು.23- ವಿಶ್ವಾಸಮತ ಯಾಚನೆ ಮುಂದೂಡಿಕೆಯಾದರೆ ನಾನೇ ಹೊರ ನಡೆಯುತ್ತೇನೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇವತ್ತೇ ವಿಶ್ವಾಸ ಮತ ಸಾಬೀತುಪಡಿಸೋಣ. ಒಂದು ವೇಳೆ ಇಂದು ವಿಶ್ವಾಸಮತ ಸಾಬೀತು ಮುಂದೂಡಿಕೆಯಾದರೆ ನಾನೇ ಸದನದಿಂದ ಹೊರ ನಡೆಯುತ್ತೇನೆ ಎಂಬ ಸಂದೇಶವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ರವಾನಿಸಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಡಿ.ಕೆ.ಶಿವಕುಮಾರ್ ಮೂಲಕ ಮುಖ್ಯಮಂತ್ರಿಗೆ ಈ ಸಂದೇಶ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.
ಸುಪ್ರೀಂಕೋರ್ಟ್ ನಮ್ಮ ಪರವಾಗಿ ಆದೇಶ ನೀಡಿದರೆ ಅದಕ್ಕೆ ನನ್ನದೇನು ತಕರಾರಿಲ್ಲ. ಆದರೆ ಕೋರ್ಟ್ ಆದೇಶ ನಮ್ಮ ಪರವಾಗಿ ಬಾರದೇ ಸುಮ್ಮನೆ ನಾಳೆಗೆ ವಿಶ್ವಾಸಮತ ಸಾಬೀತು ಮಾಡುವುದಕ್ಕೆ ದಿನ ದೂಡಲು ಮುಂದಾದರೆ ನಾನೇ ಸದನದಿಂದ ಹೊರ ನಡೆಯುತ್ತೇನೆ ಎಂದು ಸಿದ್ದರಾಮಯ್ಯ ಕಾಂಗ್ರೆಸ್ ಮುಖಂಡರಿಗೆ ತಿಳಿಸಿದ್ದಾರೆ.
ಇಷ್ಟರಲ್ಲೇ ನಾವು ಬಹುಮತ ಸಾಬೀತು ಪಡಿಸಬೇಕಿತ್ತು.ಆದರೆ ಸಿಎಂ ಸುಮ್ಮನೆ ಕಾಲಹರಣ ಮಾಡುತ್ತಿದ್ದಾರೆ.ನಾನು ಸೋಮವಾರ ಬಹುಮತ ಸಾಬೀತು ಮಾಡುತ್ತೇನೆ ಎಂದು ಶುಕ್ರವಾರವೇ ಸದನದಲ್ಲಿ ಸ್ಪಷ್ಟವಾಗಿ ಹೇಳಿದ್ದೆ.ಸಿಎಂ ಒಪ್ಪಿಗೆ ಮೇರೆಗೆ ನಾನು ಸದನದಲ್ಲಿ ಈ ಮಾತನ್ನು ಆಡಿದ್ದೆ.ಸ್ವತಃ ಕುಮಾರಸ್ವಾಮಿಯವರೇ ಸೋಮವಾರ ವಿಶ್ವಾಸ ಮತಯಾಚಿಸುವುದಾಗಿ ತಿಳಿಸಿದ್ದರು.ಆದರೆ ನಿನ್ನೆ ಸಿಎಂ ಉಲ್ಟಾ ಹೊಡೆದು ಬಿಟ್ಟಿದ್ದಾರೆ.
ಮೈತ್ರಿ ಅನಿವಾರ್ಯತೆಗೆ ನಿನ್ನೆ ಸ್ಪೀಕರ್ ಮನವೊಲಿಕೆಗೂ ಮುಂದಾಗಿದ್ದೆ.ಆದರೆ ಶುಕ್ರವಾರ ನಾನು ನುಡಿದ ಮಾತಿನಂತೆ ನಡೆಯದೇ ತಪ್ಪು ಮಾಡಿದ್ದೇನೆ ಎಂದು ಆಪ್ತರ ಬಳಿ ಸಿದ್ದರಾಮಯ್ಯ ಬೇಸರದಿಂದ ಹೇಳಿಕೊಂಡಿದ್ದಾರೆ.
ಸೋಮವಾರ ರಾತ್ರಿ ನಾನೇ ಸದನಕ್ಕೆ ಮಾತುಕೊಟ್ಟಿದ್ದೇನೆ. ಇಂದು ಈ ಮಾತಿನಂತೆ ನಡೆಯದೇ ಇದ್ದರೆ ನಾನು ತಲೆ ತಗ್ಗಿಸಬೇಕಾಗುತ್ತದೆ ಯಾವ ಕಾರಣಕ್ಕೂ ಇವತ್ತು ಮಾತು ತಪ್ಪಬಾರದು. ಬಹುಮತ ಸಾಬೀತಿಗೆ ಮುಂದಾಗಲೇಬೇಕು ಎಂದು ಖಡಕ್ಕಾಗಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು,ಜುಲ.23-ಸಮ್ಮಿಶ್ರ ಸರ್ಕಾರ ಪತನವಾಗುವುದನ್ನೇ ಚಾತಕ ಪಕ್ಷಿಯಂತೆ ಕಾಯುತ್ತಿರುವ ಬಿಜೆಪಿ ಶಾಸಕರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಶುಭ ಹಾರೈಸಿದ ಪ್ರಸಂಗ ಇಂದು ನಡೆಯಿತು.
ಬೆಳಗ್ಗೆ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿಯಾಗಿದ್ದ ಬಿಜೆಪಿ ಶಾಸಕರಾದ ಎಸ್.ಆರ್.ವಿಶ್ವನಾಥ್ ಹಾಗೂ ಸುನೀಲ್ಕುಮಾರ್ ಹಿಂದಿರುಗುತ್ತಿದ್ದ ವೇಳೆ ಎದುರಾದ ಸಿದ್ದರಾಮಯ್ಯ ಇಬ್ಬರಿಗೂ ಹಸ್ತಲಾಘವ ಮಾಡಿ ಶುಭ ಹಾರೈಸಿದರು.
ಈ ದಿಢೀರ್ ಬೆಳವಣಿಗೆ ನಾನಾ ಊಹೋಪೆÇೀಹಗಳಿಗೆ ಎಡೆ ಮಾಡಿಕೊಟ್ಟಿತು.ಆಕಸ್ಮಿಕವಾಗಿ ಇಬ್ಬರೂ ಶಾಸಕರು ಎದುರಾದ ವೇಳೆ ಸಿದ್ದರಾಮಯ್ಯ ಸೌಹಾರ್ದಯುತವಾಗಿ ಶುಭ ಹಾರೈಸಿದ್ದಾರೆ.ಇದಕ್ಕೂ ಪ್ರಸ್ತುತ ರಾಜಕೀಯ ವಿದ್ಯಮಾನಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ಸಿದ್ದರಾಮಯ್ಯನವರವರ ಆಪ್ತ ಮೂಲಗಳು ಖಚಿತಪಡಿಸಿವೆ.