ನಾಳೆ ಅಥವಾ ಶುಕ್ರವಾರ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣಚನ ಸ್ವೀಕರಿಸಲಿರುವ ಯಡಿಯೂರಪ್ಪ

ಬೆಂಗಳೂರು, ಜು.24-ಕೇಂದ್ರ ನಾಯಕರ ಅನುಮತಿಯನ್ನು ಎದುರು ನೋಡುತ್ತಿದ್ದು, ನಾಳೆ ಅಥವಾ ಶುಕ್ರವಾರ ಯಡಿಯೂರಪ್ಪ ಮಾತ್ರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.ಮೊದಲ ಹಂತದಲ್ಲಿ ಯಡಿಯೂರಪ್ಪ ಮಾತ್ರ ಪ್ರಮಾಣ ವಚನ ಸ್ವೀಕರಿಸಬೇಕೆಂದು ವರಿಷ್ಠರು ಸೂಚನೆ ಕೊಟ್ಟಿದ್ದಾರೆ.

ಬಳಿಕ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದ ನಂತರ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಕಳೆದ ರಾತ್ರಿ ಕಾನೂನು ಸಂಸದೀಯ ಮಂಡಳಿ ಸಭೆ ನಡೆದಿದ್ದು, ಪಕ್ಷದ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಅಥವಾ ಬೇರೊಬ್ಬ ಹಿರಿಯ ನಾಯಕರನ್ನು ರಾಜ್ಯಕ್ಕೆ ಕಳುಹಿಸಿಕೊಡುವ ಸಾಧ್ಯತೆ ಇದೆ. ವೀಕ್ಷಕರು ಸಂಜೆಯೊಳಗೆ ಬೆಂಗಳೂರಿಗೆ ಆಗಮಿಸಲಿದ್ದು, ಶಾಸಕಾಂಗ ಸಭೆಯ ನಾಯಕರನ್ನು ಆಯ್ಕೆ ಮಾಡಿದ ಬಳಿಕ ಸರ್ಕಾರ ರಚನೆಗೆ ರಾಜ್ಯಪಾಲರ ಬಳಿ ಹಕ್ಕು ಮಂಡಿಸಲಿದ್ದಾರೆ.
ಕೇಂದ್ರ ವರಿಷ್ಠರೊಂದಿಗೆ ರಾಜ್ಯ ಘಟಕದ ನಾಯಕರು ನಿರಂತರವಾಗಿ ಸಂಪರ್ಕದಲ್ಲಿದ್ದು, ಸರ್ಕಾರ ರಚನೆ ಮುಂದೆ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ನಿರಂತರವಾಗಿ ಮಾಹಿತಿ ನೀಡಲಾಗುತ್ತಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಕೆಲವು ನಾಯಕರ ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವ ರಾಜ್ಯ ನಾಯಕರು ಇಂಚಿಂಚೂ ಮಾಹಿತಿಗಳನ್ನು ನೀಡುತ್ತಿದ್ದಾರೆ.
ವಿಳಂಬ ನೀತಿ ಅನುಸರಿಸಬಾರದೆಂದು ವರಿಷ್ಠರು ಕೂಡ ಸೂಚನೆ ಕೊಟ್ಟಿದ್ದಾರೆ. ಭಿನ್ನಮತೀಯ ಶಾಸಕರ ಒಲವು ಯಾವುದೇ ಕ್ಷಣದಲ್ಲಿ ಏನು ಬೇಕಾದರೂ ಆಗಬಹುದು. ಹಾಗೊಂದು ವೇಳೆ ಕಾನೂನು ಬಿಕ್ಕಟ್ಟು ಸೃಷ್ಟಿಯಾದರೆ ರಾಜ್ಯಪಾಲರು ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡುವ ನಿರೀಕ್ಷೆ ಇದೆ. ಕೂಡಲೇ ಸರ್ಕಾರ ರಚನೆಗೆ ಕಾರ್ಯೋನ್ಮುಖರಾಗುವಂತೆ ಸೂಚನೆ ಕೊಟ್ಟಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ