ಸ್ಪೀಕರ್ ರಮೇಶ್‍ಕುಮಾರ್ ಭೇಟಿಯಾದ ಬಿಜೆಪಿ ನಿಯೋಗ

ಬೆಂಗಳೂರು, ಜು.24-ಮಾಧುಸ್ವಾಮಿ, ಬಸವರಾಜಬೊಮ್ಮಾಯಿ ಅವರನ್ನೊಳಗೊಂಡ ಬಿಜೆಪಿ ಶಾಸಕರ ನಿಯೋಗ ಇಂದು ವಿಧಾನಸಭಾ ಅಧ್ಯಕ್ಷ ರಮೇಶ್‍ಕುಮಾರ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿತು.

ವಿಧಾನಸಭಾಧ್ಯಕ್ಷರ ಕೊಠಡಿಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ರಮೇಶ್‍ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದರು.
ಮೈತ್ರಿ ಸರ್ಕಾರ ಪತನವಾಗಿರುವ ಹಿನ್ನೆಲೆಯಲ್ಲಿ ಮುಂದಿನ ಬೆಳವಣಿಗೆಗಳ ಬಗ್ಗೆ ಸಮಾಲೋಚನೆ ನಡೆಸಿದರೆಂದು ತಿಳಿದು ಬಂದಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ