ಬೆಂಗಳೂರು, ಜು.24- ಬಿಜೆಪಿ ಸರ್ಕಾರ ರಚನೆ ಮಾಡಲು ತಯಾರಿ ನಡೆಸಿರುವ ಹಿನ್ನೆಲೆಯಲ್ಲಿ ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಲು ರಮೇಶ್ಕುಮಾರ್ ಮುಂದಾಗಿದ್ದಾರೆ.
ನಿನ್ನೆ ಅಧಿವೇಶನದಲ್ಲಿ ವಿಶ್ವಾಸಮತ ಯಾಚನೆ ಸಂದರ್ಭದಲ್ಲೇ ಅವರು ಜೇಬಿನಲ್ಲಿ ರಾಜೀನಾಮೆ ಪತ್ರ ಇಟ್ಟುಕೊಂಡಿದ್ದರು. ವಿಶ್ವಾಸಮತ ಯಾಚನೆ ಒಂದು ದಿನ ಮುಂದಕ್ಕೆ ಹೋದರೂ ರಾಜೀನಾಮೆ ನೀಡುತ್ತೇನೆ ಎಂದೂ ಹೇಳಿದ್ದರು.
ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಅವರ ಕುರಿತು ಅವಹೇಳನಕಾರಿ ಪೆÇೀಸ್ಟಿಂಗ್ಗಳು ಹರಿದಾಡುತ್ತಿದ್ದು, ಇದರಿಂದ ಮನನೊಂದಿರುವ ರಮೇಶ್ಕುಮಾರ್ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್-ಜೆಡಿಎಸ್ ನಾಯಕರು ರಮೇಶ್ಕುಮಾರ್ ಅವರ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ.ಬಿಜೆಪಿ ಯಾವ ನಿರ್ಣಯ ತೆಗೆದುಕೊಳ್ಳುತ್ತದೋ ಕಾದು ನೋಡೋಣ ಸುಮ್ಮನಿರಿ ಎಂದು ಹೇಳಿದ್ದಾರೆಂದು ತಿಳಿದುಬಂದಿದೆ.