ಶಾಸಕ ರಾಮಲಿಂಗಾರೆಡ್ಡಿಯವರನ್ನು ಭೇಟಿ ಮಾಡಿದ ಉಸ್ತುವಾರಿ ಸಿಎಂ ಕುಮಾರಸ್ವಾಮಿ

ಬೆಂಗಳೂರು,ಜು.25-ಉಸ್ತುವಾರಿ ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ರಾಜಕೀಯ ಪ್ರಯತ್ನಗಳನ್ನು ಕೈ ಬಿಟ್ಟಂತಿಲ್ಲ.
ಇಂದು ಬೆಳಗ್ಗೆ ಮಾಜಿ ಸಚಿವ ರಾಮಲಿಂಗಾರೆಡ್ಡಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಆನಂತರ ಪದ್ಮನಾಭನಗರದ ನಿವಾಸದಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿ ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿ ಮುಂದಿನ ಕಾರ್ಯತಂತ್ರಗಳ ಬಗ್ಗೆ ಸಲಹೆ ಪಡೆದಿದ್ದಾರೆ ಎನ್ನಲಾಗಿದೆ.
ನಿನ್ನೆಯಷ್ಟೇ ಶಾಸಕರ ಸಭೆ ನಡೆಸಿ ಎಲ್ಲರಿಗೂ ಧೈರ್ಯ ತುಂಬುವ ಕೆಲಸ ಮಾಡಿದ್ದ ಅವರು, ರಾಜಕೀಯ ಅಸ್ಥಿರತೆಯಲ್ಲಿ ಏನೂ ಬೇಕಾದರೂ ಆಗಬಹುದು ಎಂಬ ಹೇಳಿಕೆ ನೀಡಿದ್ದರು.

ಸರ್ಕಾರ ರಚಿಸುವ ತೀವ್ರ ಉತ್ಸಾಹದಲ್ಲಿದ್ದ ಬಿಜೆಪಿ ಇದುವರೆಗೂ ಸರ್ಕಾರ ರಚನೆಗೆ ಮುಂದಾಗಿಲ್ಲದಿರುವುದು ಹಲವು ಊಹಾಪೆÇೀಹಗಳಿಗೆ ಎಡೆಮಾಡಿಕೊಟ್ಟಿದೆ.
ಈ ನಡುವೆ ಕುಮಾರಸ್ವಾಮಿಯವರು ರಾಜಕೀಯ ನಾಯಕರನ್ನು ಭೇಟಿ ಮಾಡುತ್ತಿರುವುದು ರಾಜಕೀಯ ವಲಯದಲ್ಲಿ ಹೊಸ ಆಸೆಗಳನ್ನು ಗರಿಗೆದರಿಸುತ್ತಿವೆ.
ದಿನಕ್ಕೊಂದು ತಿರುವು ಪಡೆಯುತ್ತಿರುವ ರಾಜಕೀಯ ವಿದ್ಯಮಾನಗಳು ಯಾವ ಹಂತಕ್ಕೆ ತಲುಪುತ್ತವೆ ಎಂಬುದನ್ನು ಕಾಲವೇ ನಿರ್ಧರಿಸಬೇಕಾಗಿದೆ. ಹೀಗಾಗಿ ಮೈತ್ರಿ ಸರ್ಕಾರ ಪತವಾದರೂ ರಾಜಕೀಯ ಗೊಂದಲಗಳಿಗೆ ತೆರೆ ಬಿದ್ದಿಲ್ಲ. ಈ ನಿಟ್ಟಿನಲ್ಲಿ ಕುಮಾರಸ್ವಾಮಿ ಅವರು ನಡೆಸುತ್ತಿರುವ ಪ್ರಯತ್ನಗಳು ಮೇಲ್ನೋಟಕ್ಕೆ ಸಹಜ ಎನಿಸಿದರೂ ರಾಜಕೀಯ ಲೆಕ್ಕಾಚಾರ ಏನಿದೆ ಎಂಬುದು ನಿಗೂಢವಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ