ಸದ್ಯದ ಪರಿಸ್ಥಿತಿಯಲ್ಲಿ ಯಾರಿಂದಲೂ ಸುಭದ್ರ ಸರ್ಕಾರ ರಚನೆ ಸಾಧ್ಯವಿಲ್ಲ-ಉಸ್ತುವಾರಿ ಸಿಎಂ ಕುಮಾರಸ್ವಾಮಿ

ಬೆಂಗಳೂರು, ಜು.25- ಸದ್ಯದ ಪರಿಸ್ಥಿತಿಯಲ್ಲಿ ಯಾರೇ ಸರ್ಕಾರ ರಚನೆ ಮಾಡಿದರೂ ಸ್ಥಿರ ಹಾಗೂ ಸುಭದ್ರ ಸರ್ಕಾರ ಅಸಾಧ್ಯ ಎಂದು ಉಸ್ತುವಾರಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದರು.

ಮಾಜಿ ಸಚಿವ, ಶಾಸಕ ರಾಮಲಿಂಗಾರೆಡ್ಡಿ ಅವರನ್ನು ಲಕ್ಕಸಂದ್ರದ ಮನೆಯಲ್ಲಿ ಭೇಟಿ ಮಾಡಿ ಕೆಲ ಕಾಲ ಚರ್ಚೆ ನಡೆಸಿ ಹೊರ ಬಂದ ನಂತರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದ ಅಭಿವೃದ್ಧಿ ಕಡೆಗೆ ಗಮನ ಕೊಡುತ್ತಾರೋ ಚುನಾವಣೆಗೆ ಸಮಯ ಕೊಡುತ್ತಾರೋ ಗೊತ್ತಿಲ್ಲ. ಹೀಗಾಗಿ ಮುಂದಿನ ಸರ್ಕಾರ ಸುಭದ್ರ ಸರ್ಕಾರ ಆಗಲು ಸಾಧ್ಯವಿಲ್ಲ ಎಂದರು.
ಬಿಜೆಪಿ ಸರ್ಕಾರ ರಚಿಸುವ ಉತ್ಸಾಹದಲ್ಲಿದೆ.ಆದರೆ ಆ ಪಕ್ಷದಿಂದಲೂ ಸ್ಥಿರ ಸರ್ಕಾರ ಸಾಧ್ಯವಿಲ್ಲ. ಪ್ರಸ್ತುತ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ ಹಾಗೆನ್ನಿಸುತ್ತದೆ ಎಂದರು.
ಬಿಜೆಪಿ ರಾಷ್ಟ್ರೀಯ ನಾಯಕರು ಸರ್ಕಾರ ರಚನೆ ಬಗ್ಗೆ ಹಸಿರು ನಿಶಾನೆ ನೀಡದ ಬಗ್ಗೆ ಗಮನ ಸೆಳೆದಾಗ ಅದು ಅವರ ಪಕ್ಷದ ವಿಚಾರ.ಅವರನ್ನೇ ಕೇಳಿ ಎಂದು ಹೇಳಿದರು.

ಅತೃಪ್ತ ಶಾಸಕರ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಮತ್ತೊಂದು ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಇತ್ತೀಚೆಗೆ ನಡೆದ ರಾಜಕೀಯ ವಿದ್ಯಮಾನದ ವೇಳೆ ರಾಮಲಿಂಗಾರೆಡ್ಡಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.ಅವರಿಗೆ ರಾಜೀನಾಮೆ ವಾಪಸ್ ಪಡೆಯಲು ಮನವಿ ಮಾಡಿದ್ದೆವು.ಅದಕ್ಕೆ ಅವರು ಬೆಲೆ ಕೊಟ್ಟಿದ್ದರು.ರಾಜೀನಾಮೆ ವಾಪಸ್ ಪಡೆದು ವಿಧಾನಸಭೆಗೆ ಆಗಮಿಸಿ ಮತದಾನ ಮಾಡಿದ್ದರು.ಆದರೆ ಅಧಿವೇಶನದ ಸಂದರ್ಭದಲ್ಲಿ ಅವರಿಗೆ ಕೃತಜ್ಞತೆ ಸಲ್ಲಿಸಲು ಆಗಿರಲಿಲ್ಲ. ಹೀಗಾಗಿ ಇಂದು ಭೇಟಿಯಾಗಿರುವುದಾಗಿ ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ರಾಮಲಿಂಗಾರೆಡ್ಡಿ ಅವರ ಪಕ್ಷದ ಬಗೆಗಿನ ಕಾಳಜಿ ಬಗ್ಗೆ ಹೆಮ್ಮೆ ಎನಿಸುತ್ತದೆ ಎಂದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ರಾಮಲಿಂಗಾರೆಡ್ಡಿ ಭೇಟಿ ಸಂದರ್ಭದಲ್ಲಿ ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ. ನಾನು ರಾಜೀನಾಮೆ ಕೊಟ್ಟಿದ್ದು ನಮ್ಮ ಪಕ್ಷದ ಆಂತರಿಕ ವಿಚಾರ ಎಂದು ತಿಳಿಸಿದರು.

ದೇವೇಗೌಡರು ಸೇರಿದಂತೆ ಕಾಂಗ್ರೆಸ್‍ನ ಹಲವು ಮುಖಂಡರು , ಕುಮಾರಸ್ವಾಮಿಯವರು ಸಹ ರಾಜೀನಾಮೆ ಹಿಂಪಡೆಯುವಂತೆ ಹೇಳಿದ್ದರು. ಅದರಂತೆ ರಾಜೀನಾಮೆಯನ್ನು ಹಿಂಪಡೆದಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಲು ಬಂದಿದ್ದರು ಎಂದರು.
ಬೆಂಗಳೂರಿನ ಅತೃಪ್ತ ಶಾಸಕರು ಸಂಪರ್ಕಕ್ಕೆ ಸಿಗುತ್ತಿಲ್ಲ, ಫೆÇೀನ್‍ನಲ್ಲೂ ಸಿಗತ್ತಿಲ್ಲ. ಹಂಗಾಮಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಅವರ ಅನುಭವದಿಂದ ರಾಜಕೀಯ ಅಸ್ಥಿರತೆಯ ಬಗ್ಗೆ ಮಾತನಾಡಿದ್ದಾರೆ.ಇನ್ನು ಮೈತ್ರಿಯ ವಿಚಾರವಾಗಿ ನಮ್ಮ ನಾಯಕರು ಮಾತನಾಡಿಕೊಳ್ಳುತ್ತಾರೆ.ಇದು ಕಾಪೆರ್Çರೇಷನ್ ಚುನಾವಣೆಯಲ್ಲ. ಹಾಗಾಗಿ ನಾಯಕರು ಮಾತನಾಡುತ್ತಾರೆ ಎಂದು ತಿಳಿಸಿದರು.
ಅತೃಪ್ತ ಶಾಸಕರ ವಿಚಾರದಲ್ಲಿ ಸಭಾಧ್ಯಕ್ಷರು ನಿರ್ಧಾರ ಕೈಗೊಳ್ಳುತ್ತಾರೆ.ಅದೇ ರೀತಿಯ ಕಾನೂನಾತ್ಮಕ ವಿಚಾರಗಳನ್ನು ರಾಜ್ಯಪಾಲರು ನೋಡಿಕೊಳ್ಳುತ್ತಾರೆ ಎಂದರು.
ಬಿಬಿಎಂಪಿಯಲ್ಲಿ ನಾಲ್ಕು ವರ್ಷಗಳಿಂದ ಬಿಜೆಪಿ ಗದ್ದುಗೆ ಏರಲು ಪ್ರಯತ್ನಿಸುತ್ತಿದೆ.ಚುನಾವಣೆ ಸಂದರ್ಭದಲ್ಲಿ ಏನು ಮಾಡಬೇಕೋ ಅದನ್ನು ತೀರ್ಮಾನ ಮಾಡುತ್ತೇವೆ. ಎಂದು ಪ್ರಶ್ನೆಗೆ ಉತ್ತರಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ