ನಾಯಕತ್ವದ ವಿಷಯದಲ್ಲಿ ಯಾವುದೇ ಗೊಂದಲವಿಲ್ಲ-ಶಾಸಕ ರೇಣುಕಾಚಾರ್ಯ

ಬೆಂಗಳೂರು, ಜು.25- ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬಿ.ಎಸ್.ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕೇಂದ್ರ ಬಿಜೆಪಿ ವರಿಷ್ಠರು ಸ್ಪಷ್ಟಪಡಿಸಿರುವುದರಿಂದ ನಾಯಕತ್ವ ವಿಷಯದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಸ್ಪಷ್ಟಪಡಿಸಿದ್ದಾರೆ.
ಯಡಿಯೂರಪ್ಪನವರ ನಿವಾಸ ದವಳಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ವಿಷಯದಲ್ಲಿ ಬಿಜೆಪಿಯೊಳಗೆ ಇಲ್ಲವೇ ಹೈಕಮಾಂಡ್ ಮಟ್ಟದಲ್ಲಿ ಯಾವುದೇ ರೀತಿಯ ಗೊಂದಲ ಇಲ್ಲ. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗುವುದು ನೂರಕ್ಕೆ ನೂರರಷ್ಟು ಖಚಿತ.ಊಹಾಪೆÇೀಗಳಿಗೆ ಯಾರೊಬ್ಬರೂ ತಲೆಕೆಡಿಸಿಕೊಳ್ಳಬಾರದು ಎಂದು ಮನವಿ ಮಾಡಿದರು.

ಕೇಂದ್ರ ವರಿಷ್ಠರೇ ಸ್ಪಷ್ಟನೆ ಕೊಟ್ಟಿರುವುದರಿಂದ ನಮ್ಮಲ್ಲಿ ಗೊಂದಲಗಳಿಲ್ಲ. ಶಾಸಕಾಂಗ ಸಭೆಯಲ್ಲಿ ಶಾಸಕರೆಲ್ಲರೂ ಸರ್ವಾನುಮತದಿಂದ ಶಾಸಕಾಂಗ ನಾಯಕನನ್ನು ಆಯ್ಕೆ ಮಾಡುತ್ತಾರೆ. ಕೆಲವು ಕಾರಣಗಳಿಂದ ವಿಳಂಬವಾಗಿದೆಯೇ ಹೊರತು ಪಕ್ಷದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದರು.
ಶಾಸಕರು ಸ್ವಯಂ ಪ್ರೇರಿತರಾಗಿ ರಾಜೀನಾಮೆ ಕೊಟ್ಟಿರುವುದರಿಂದ ಸ್ಪೀಕರ್ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕು.ನಮಗೆ ಸ್ಪೀಕರ್ ಅವರ ಬಗ್ಗೆ ಅಪಾರ ಗೌರವವಿದೆ.ನಿಷ್ಪಕ್ಷಪಾತ ತೀರ್ಮಾನವನ್ನು ಕೈಗೊಳ್ಳುವ ನಿರೀಕ್ಷೆ ನಮಗದಿದೆ ಎಂದರು.

ವರಿಷ್ಠರು ಸರಿಯಾದ ತೀರ್ಮಾನ ಕೈಗೊಳ್ಳುತ್ತಾರೆ.ನಮಗೆ ಸರ್ಕಾರ ರಚನೆ ಮಾಡುವ ಆತುರವಿಲ್ಲ. ಬಹುಮತ ಇರುವುದರಿಂದ ವರಿಷ್ಠರ ನಿರ್ದೇಶನವನ್ನು ಎದುರು ನೋಡುತ್ತಿದ್ದೇವೆ. ಒಂದೆರಡು ದಿನ ವಿಳಂಬವಾಗಬಹುದು.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ತಿಳಿಸಿದರು.
ಸಚಿವ ಸಂಪುಟಕ್ಕೆ ಯಾರನ್ನು ತೆಗೆದುಕೊಳ್ಳಬೇಕೆಂಬುದನ್ನು ವರಿಷ್ಠರು ಮತ್ತು ಪಕ್ಷದ ಪ್ರಮುಖರು ತೀರ್ಮಾನಿಸುತ್ತಾರೆ.ಯಾರಿಗೆ ಯಾವ ಜವಾಬ್ದಾರಿ ನೀಡಬೇಕೆಂಬುದು ಯಡಿಯೂರಪ್ಪನವರಿಗೆ ಗೊತ್ತು.ನನಗೆ ಮಂತ್ರಿ ಸ್ಥಾನ ನೀಡಿದರೆ ಯಶಸ್ವಿಯಾಗಿ ನಿಭಾಯಿಸುತ್ತೇನೆ.ಆದರೆ, ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ರೇಣುಕಾಚಾರ್ಯ ಸ್ಪಷ್ಟಪಡಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ