ಕುತೂಹಲ ಮೂಡಿಸಿದ ರಾಮಲಿಂಗಾರೆಡ್ಡಿ ಮತ್ತು ಕುಮಾರಸ್ವಾಮಿ ಭೇಟಿ

ಬೆಂಗಳೂರು, ಜು.25- ಬದಲಾದ ಪರಿಸ್ಥಿತಿಯಲ್ಲಿ ಇಂದು ಶಾಸಕ ರಾಮಲಿಂಗಾರೆಡ್ಡಿ ಅವರ ಮನೆಗೆ ಉಸ್ತುವಾರಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಭೇಟಿ ನೀಡಿರುವುದು ಭಾರೀ ಕುತೂಹಲ ಕೆರಳಿಸಿದೆ.

ಲಕ್ಕಸಂದ್ರದಲ್ಲಿರುವ ರೆಡ್ಡಿ ಅವರ ಅವರ ನಿವಾಸಕ್ಕೆ ಆಗಮಿಸಿದ ಕುಮಾರಸ್ವಾಮಿ ಅವರು ಸುಮಾರು ಎರಡು ತಾಸಿಗೂ ಹೆಚ್ಚು ಕಾಲ ಸಮಾಲೋಚನೆ ನಡೆಸಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ನಿನ್ನೆಯಷ್ಟೆ ಮಾಧ್ಯಮಗಳೊಂದಿಗೆ ಮಾತನಾಡುವಾಗ ಮುಂದಿನ ದಿನಗಳಲ್ಲಿ ಏನು ಬೇಕಾದರೂ ಆಗಬಹುದು ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಮಹತ್ವ ಪಡೆದಿದ್ದು, ಅದರ ನಡುವೆಯೇ ಇಂದು ಕಾಂಗ್ರೆಸ್ ಮುಖಂಡರ ಮನೆಗೆ ಭೇಟಿ ನೀಡುತ್ತಿರುವುದು ಅಚ್ಚರಿ ಮೂಡಿಸಿದೆ.

ಮೈತ್ರಿ ಮುಂದುವರಿಸುವ ಬಗ್ಗೆ ಹಲವು ಪರ-ವಿರುದ್ಧದ ಮಾತುಗಳು ಕೇಳಿಬರುತ್ತಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಹೇಗೆ ಕಾರ್ಯತಂತ್ರ ರೂಪಿಸಬೇಕು ಎಂಬುದರ ಬಗ್ಗೆ ಚರ್ಚೆಗಳು ನಡೆದಿವೆ.

ಇಂದು ಈ ಇಬ್ಬರು ನಾಯಕರ ಭೇಟಿ ವೇಳೆ ಹಲವು ಮಹತ್ವದ ವಿಷಯಗಳು ಪ್ರಸ್ತಾಪವಾಗಿವೆ. ಅತೃಪ್ತ ಶಾಸಕರ ನಡೆ ಬಗ್ಗೆಯೂ ಚರ್ಚೆಗಳು ನಡೆದಿವೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ