ಅಲ್ಪಮತ ಹೊಂದಿರುವ ಬಿಜೆಪಿಗೆ ಸರ್ಕಾರ ರಚಿಸಲು ರಾಜ್ಯಪಾಲರಿಂದ ಆಹ್ವಾನ-ಕುದುರೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಟ್ಟಂತಾಗುತ್ತದೆ

ಬೆಂಗಳೂರು, ಜು.26-ಸಂಖ್ಯಾಬಲ ಕೊರತೆಯಿರುವ ಬಿಜೆಪಿಗೆ ಸರ್ಕಾರ ರಚನೆ ಮಾಡಲು ಅವಕಾಶ ಮಾಡಿಕೊಡುವ ಮೂಲಕ ಅನುವು ಮಾಡಿಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರು, 225 ಮಂದಿ ಶಾಸಕರ ಸಂಖ್ಯಾಬಲ ಇರುವ ವಿಧಾನಸಭೆಯಲ್ಲಿ ಇಬ್ಬರು ಅನರ್ಹಗೊಂಡಿದ್ದು, 222 ಮಂದಿ ಶಾಸಕರಿದ್ದಾರೆ. ಸರ್ಕಾರ ರಚನೆಗೆ 112 ಮಂದಿ ಶಾಸಕರು ಬೇಕು. ಬಿಜೆಪಿ ಬಳಿ ಇರುವುದು 105 ಮಂದಿ ಮಾತ್ರ. ರಾಜೀನಾಮೆ ನೀಡಿರುವ 13 ಮಂದಿ ಶಾಸಕರ ಅರ್ಜಿ ಇನ್ನೂ ವಿಚಾರಣೆಗೆ ಬಾಕಿ ಇದೆ.

ಹೀಗಾಗಿ ಅವರು ಈಗಲೂ ಕಾಂಗ್ರೆಸ್ ಶಾಸಕರಾಗಿದ್ದಾರೆ. ಅಲ್ಪಮತ ಹೊಂದಿರುವ ಬಿಜೆಪಿಗೆ ಸರ್ಕಾರ ರಚಿಸಲು ರಾಜ್ಯಪಾಲರು ಆಹ್ವಾನ ನೀಡಿರುವುದು ಕುದುರೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಟ್ಟಂತಾಗುತ್ತದೆ. ಈ ಹಿಂದೆ ವಿಧಾನಸಭೆಯಲ್ಲಿ ತರಾತುರಿಯಲ್ಲಿ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರು ಆದೇಶ ನೀಡಿದ್ದರು. ಅದೇ ರೀತಿ ಸರ್ಕಾರ ರಚನೆಗೂ ಆತುರದ ನಿರ್ಧಾರ ತೆಗೆದುಕೊಂಡು ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಿದ್ದಾರೆ ಎಂದು ಉಗ್ರಪ್ಪ ಆರೋಪಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ