ಮುಂಬೈ,ಜು.26- ವಾಣಿಜ್ಯ ನಗರಿ ಮುಂಬೈನಲ್ಲಿ ಭಾರೀ ವರ್ಷಧಾರೆಯಾಗಲಿದ್ದು, ಇಂದಿನಿಂದ ಐದು ದಿನಗಳ ಕಾಲ ಮಹಾರಾಷ್ಟ್ರದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಬೆಳಗ್ಗೆ 6.30ರಿಂದ ಮಳೆ ಸುರಿಯುತ್ತಿದ್ದು, ಮುಂಬೈ ಮತ್ತು ನವಿ ಮುಂಬೈ ಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇಂದು ಕೂಡ ಹೆಚ್ಚು ಮಳೆ ಸುರಿಯಲಿದೆ. ಉಳಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ನಿನ್ನೆ 3 ಸೆಂಟೀಮೀಟರ್ನಷ್ಟು ಮಳೆಯಾಗಿದ್ದು, ಸೈಯಾನ್, ಮಾತುಂಗ, ಮಹಿಮ್, ಅಂಧೇರಿ, ಮಲಾದ್ ಮತ್ತು ದಹೀಸರ್ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿತ್ತಲ್ಲದೆ ವಾಹನಗಳ ಸಂಚಾರಕ್ಕೆ ಭಾರೀ ಅಡ್ಡಿಯುಂಟು ಮಾಡಿತ್ತು.
ರಾತ್ರಿ ಮತ್ತು ಬೆಳಗ್ಗೆ ವೇಳೆ ಗಳಲ್ಲಿ ನಗರ ಮತ್ತು ಉಪನಗರಗಳಲ್ಲಿ ಸಾಧಾರಣವಾಗಿ ಮಳೆಯಾಗಲಿದ್ದು, ಮುಂದಿನ ಐದು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಟ್ವೀಟ್ ಮಾಡಿದೆ.