ಬೆಂಗಳೂರು, ಜು.26- ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಯಡಿಯೂರಪ್ಪ ಅವರು ಯಾವ ರೀತಿ ತಮ್ಮ ಸರ್ಕಾರದ ಬಹುಮತ ಸಾಬೀತುಪಡಿಸಲಿದ್ದಾರೆ ಎಂಬುದನ್ನು ಕಾದು ನೋಡುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಧಾನಸಭೆಯಲ್ಲಿ ಅವರು ಬಹುಮತವನ್ನು ಸಾಬೀತುಪಡಿಸಿದರೆ ನಮಗೆ ಸಂತೋಷ ಎಂದರು.
ಇಂದು ಬೆಳಗ್ಗೆ ಯಡಿಯೂರಪ್ಪ ಅವರು ಸರ್ಕಾರ ರಚನೆ ಮಾಡುವ ಹಕ್ಕು ಮಂಡಿಸಿದ ಕೂಡಲೇ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಬಹುಮತ ಸಾಬೀತುಪಡಿಸಿ ಯಾವ ರೀತಿ ಆಡಳಿತ ನಡೆಸುತ್ತಾರೆ ಎಂಬುದನ್ನು ಕಾದು ನೋಡೋಣ ಎಂದು ಹೇಳಿದರು.