ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಇಂದು ಮಧ್ಯಾಹ್ನ ಸುಮಾರು 12.30ಕ್ಕೆ ಯಡಿಯೂರಪ್ಪ ಅವರ ಪ್ರಮಾಣವಚನವನ್ನು ಸ್ವೀಕಾರ ಮಾಡುವ ಸಾಧ್ಯತೆ ಇದೆ. ಈ ಬಗ್ಗೆ ಬಿಎಸ್ವೈ ತಮ್ಮ ಧವಳಗಿರಿ ನಿವಾಸದಲ್ಲಿ ಮಾತನಾಡಿ ಮಾಹಿತಿ ನೀಡಿದ್ದು, ಈಗಾಗಲೇ ನಾನು ವಿರೋಧ ಪಕ್ಷದ ನಾಯಕನಾಗಿರುವುದರಿಂದ ಮತ್ತೊಮ್ಮೆ ಶಾಸಕಾಂಗದ ಸಭೆ ಅಗತ್ಯವಿಲ್ಲ. ಹೀಗಾಗಿ ನಾನು ಇಂದು ರಾಜ್ಯಪಾಲರನ್ನು ಭೇಟಿಯಾಗುತ್ತಿದ್ದೇನೆ ಎಂದರು.
ಅಷ್ಟೇ ಅಲ್ಲದೇ ಇವತ್ತೇ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಲು ಅವಕಾಶ ಮಾಡಿಕೊಡಿ ಎಂದು ರಾಜ್ಯಪಾಲ ಬಳಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು. ರಾಜ್ಯಪಾಲರು ಪ್ರಮಾಣ ವಚನ ಸ್ವೀಕಾರ ಮಾಡಲು ಒಪ್ಪಿಗೆ ಸೂಚಿದರೆ ಇಂದೇ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಈಗಾಗಲೇ ರಾಜಪಾಲರ ಭೇಟಿಗೆ ಬಿಎಸ್ವೈ ನಿವಾಸದಿಂದ ತೆರಳಿದ್ದಾರೆ.