ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕಗಳ ಬಳಕೆಗೆ ಸಂಪೂರ್ಣ ನಿಷೇಧ

ಚಂಡಿಗಢ, ಜು. 27- ಶಬ್ದ ಮಾಲಿನ್ಯಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕಗಳ ಬಳಕೆಗೆ ಸಂಪೂರ್ಣ ನಿಷೇಧ ಹೇರಿದೆ. ಅಧಿಕಾರಿಗಳ ಲಿಖಿತ ಅನುಮತಿ ಇಲ್ಲದೆ, ದೇಗುಲ, ಮಸೀದಿ ಮತ್ತು ಗುರುದ್ವಾರಗಳಂತಹ ಧಾರ್ಮಿಕ ಕೇಂದ್ರಗಳಲ್ಲೂ ಧ್ವನಿವರ್ಧಕ ಬಳಕೆ ನಿಷೇಧಿಸಲಾಗಿದೆ.

ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಧ್ವನಿವರ್ಧಕ ಅಥವಾ ಮ್ಯೂಸಿಕ್ ಸಿಸ್ಟಂ ಬಳಕೆಯನ್ನು ನಿರ್ಬಂಧಿಸಲಾಗಿದೆ. ಧ್ವನಿವರ್ಧಕಗಳ ಶಬ್ದಕ್ಕೂ ಮಿತಿ ಹೇರಲಾಗಿದ್ದು ಅದು 10 ಡೆಸಿಬಲ್ಗಿಂತಲೂ ಮೀರಬಾರದೆಂದು ಕೋರ್ಟ್ ಆದೇಶಿಸಿದೆ. ಆದರೆ, ಧಾರ್ಮಿಕ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳಲ್ಲಿ ಲೌಡ್ ಸ್ಪಿಕರ್ ಬಳಸಲು ವರ್ಷದಲ್ಲಿ 15 ದಿನಗಳ ಕಾಲ ಈ ನಿಯಮವನ್ನು ಸಡಿಲಿಸಲಾಗಿದೆ.

ಆದೇಶವನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕೆಂದು ನ್ಯಾ. ರಾಜೀವ್ ಶರ್ಮಾ ಅವರ ನೇತೃತ್ವದ ಪೀಠ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ