ಯಾದವ ಸಮಾಜಕ್ಕೆ ಸಚಿವ ಸ್ಥಾನ ನೀಡಲಿ: ಕೃಷ್ಣಯಾದವಾನಂದ ಶ್ರೀ

ಚಿತ್ರದುರ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನುಡಿದಂತೆ ನಡೆದು ಯಾದವ ಸಮಾಜಕ್ಕೆ ಸಚಿವ ಸ್ಥಾನ ನೀಡಬೇಕು ಎಂದು ಯಾದವ ಗುರುಪೀಠದ ಕೃಷ್ಣಯಾದವಾನಂದ ಶ್ರೀಗಳು ಒತ್ತಾಯ ಮಾಡಿದ್ದಾರೆ.

ಇಂದು ನಗರದಲ್ಲಿ ಮಾತನಾಡಿದ ಶ್ರೀಗಳು, ಲೋಕಸಭಾ ಚುನಾವಣೆ ವೇಳೆ ಯಾದವ ಸಮುದಾಯಕ್ಕೆ ಸಚಿವ ಸ್ಥಾನ ನೀಡುತ್ತೇವೆ ಎಂದು ಮಾತು ಕೊಟ್ಟಿದ್ದರು. ಗೊಲ್ಲರ ಅಭಿವೃದ್ಧಿ ನಿಗಮ ಮಾಡ್ತೀವಿ ಎಂದು ಹೇಳಿದ್ದರು. ಅದರಂತೆ ಮುಖ್ಯಮಂತ್ರಿಗಳು ನಡೆದುಕೊಳ್ಳಬೇಕು ಎಂದು ಹೇಳಿದರು.

ಈವರೆಗೆ ಬಂದ ಸರ್ಕಾರಗಳು ನಮಗೆ ಈ ಹಿಂದೆ ನೀಡಿದ್ದ ಯಾವ ಆಶ್ವಾಸನೆಯನ್ನು ಈಡೇರಿಸಿಲ್ಲ. ಕಳೆದ 15 ವರ್ಷಗಳಿಂದ ವಿಧಾನಸೌಧದಲ್ಲಿ ನಮ್ಮ ಸಮಾಜದ ಪ್ರತಿನಿಧಿ ಇರಲಿಲ್ಲ. ಆದರೆ ಈ ಬಾರಿ ಯಾದವ ಸಮುದಾಯದ ಮಹಿಳೆ ಪೂರ್ಣಿಮಾ ಶ್ರೀನಿವಾಸ್ ಹಿರಿಯೂರು ಕ್ಷೇತ್ರದ ಶಾಸಕಿಯಾಗಿದ್ದಾರೆ. ಅದ್ದರಿಂದ ಪೂರ್ಣಿಮಾ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ.

ಇಂದು ಈ ವಿಚಾರವಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಸಚಿವ ಸ್ಥಾನ ನೀಡುವಂತೆ ಮನವಿ ಸಲ್ಲಿಸಲು ಶ್ರೀಗಳ ನೇತೃತ್ವದಲ್ಲಿ ನಿಯೋಗವೊಂದನ್ನು ರಚನೆ ಮಾಡಿದೆ. ಈ ನಿಯೋಗದಲ್ಲಿ ಯಾದವ ಗುರುಪೀಠದ ಭಕ್ತರು ಹಾಗು ಸಮುದಾಯದ ವಿವಿಧ ಪಕ್ಷಗಳ ಮುಖಂಡರು ಭಾಗಿಯಾಗಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ