ಪಕ್ಷ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧ-ಶಾಸಕ ರಾಮದಾಸ್

ಮೈಸೂರು,ಜು.27- ನನಗೆ ಯಾವುದೇ ಹುದ್ದೆ ನೀಡಿದರೂ ಜವಾಬ್ದಾರಿಯಿಂದ ನಿರ್ವಹಿಸಲು ಸಿದ್ದನಾಗಿದ್ದೇನೆ ಎಂದು ಶಾಸಕ ರಾಮದಾಸ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪನವರು ಅಧಿಕಾರ ಸ್ವೀಕರಿಸಿದ್ದಾರೆ. ಹಾಗಾಗಿ ಬಿಜೆಪಿ ಸರ್ಕಾರದಲ್ಲಿ ನನಗೆ ಯಾವುದೇ ಜವಾಬ್ದಾರಿ ನೀಡಿದರೂ ನಿರ್ವಹಿಸುವುದಾಗಿ ತಿಳಿಸಿದರು.

ಪಕ್ಷ ಕೈಗೊಳ್ಳುವ ಯಾವುದೇ ತೀರ್ಮಾನಕ್ಕೂ ತಾವು ಬದ್ಧ . ಕೊಟ್ಟ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸುತ್ತೇನೆ ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ರಾಜಕಾರಣದಲ್ಲಿ ನಾನು ಎಂದಿಗೂ ಯಾವುದೇ ರೀತಿಯ ನಿರೀಕ್ಷೆಗಳನ್ನು ಇಟ್ಟುಕೊಂಡಿಲ್ಲ ಎಂದು ಹೇಳಿದರು.

2008ರಲ್ಲಿ ಅವಕಾಶ ತಪ್ಪಿತ್ತು. ಈ ದಿನ ಯಡಿಯೂರಪ್ಪ ಕೈ ಬಲ ಪಡಿಸುವ ಉದ್ದೇಶ ಇಟ್ಟುಕೊಂಡಿರುವುದಾಗಿ ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ