ಬೆಂಗಳೂರು, ಜು.29- ಚಂದ್ರಯಾನ-2ಯಶಸ್ಸಿಗೆ ಕಾರಣರಾದ ಇಸ್ರೋ ವಿಜ್ಞಾನಿಗಳು, ನೂತನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಭಿನಂದನೆ ಹಾಗೂ ಹಗಲಿದ ಕೇಂದ್ರದ ಮಾಜಿ ಸಚಿವ ಜೈಪಾಲ್ರೆಡ್ಡಿ ಅವರಿಗೆ ಪಾಲಿಕೆ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ನೂತನ ಜಾಹೀರಾತು ಬೈಲಾ ಅಳವಡಿಕೆ ಕುರಿತಂತೆ ಚರ್ಚಿಸಲು ಕರೆಯಲಾಗಿದ್ದ ವಿಶೇಷ ಸಭೆಯಲ್ಲಿ ಪಕ್ಷಾತೀತವಾಗಿ ನೂತನ ಸಿಎಂ ಯಡಿಯೂರಪ್ಪ ಹಾಗೂ ಇಸ್ರೋ ವಿಜ್ಞಾನಿಗಳಿಗೆ ಸಲ್ಲಿಸಲಾಯಿತು.
ಸಭೆ ಆರಂಭವಾಗುತ್ತಿದ್ದಂತೆ ಆಡಳಿತ ಪಕ್ಷದ ನಾಯಕ ಅಬ್ದುಲ್ ವಾಜೀದ್ ಮಾತನಾಡಿ, ಚಂದ್ರಯಾನ-2 ಯಸ್ಸಿಗೆ ಇಸ್ರೋ ವಿಜ್ಞಾನಿಗಳ ಪಾತ್ರ ಅಪಾರ. ಇಡೀ ವಿಶ್ವದ ಗಮನವನ್ನೇ ಸೆಳೆಯುವಂತೆ ಮಾಡಿದ್ದಾರೆ. ಅವರ ಕಾರ್ಯ ನಿಜಕ್ಕೂ ಶ್ಲಾಘನೀಯ. ಹಾಗಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದರು.
ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದ ವಿಶ್ವಾಸ ಮತ ಗೆದಿದ್ದಾರೆ. ಇವರ ಅವಧಿಯಲ್ಲಿ ಪಾಲಿಕೆಗೆ ಹೆಚ್ಚು ಅನುದಾನ ನೀಡುವ ವಿಶ್ವಾಸವಿದೆ ಎಂದು ಹೇಳಿದರು.
ಪ್ರತಿಪಕ್ಷದ ನಾಯಕರ ಪದ್ಮಾನಾಭರೆಡ್ಡಿ, ಜೆಡಿಎಸ್ ಗುಂಪಿನ ನಾಯಕಿ ನೇತ್ರಾನಾರಾಯಣ್, ಹಿರಿಯ ಸದಸ್ಯ ಉಮೇಶ್ ಶೆಟ್ಟಿ ಸೇರಿದಂತೆ ಪಕ್ಷಾತೀತವಾಗಿ ಎಲ್ಲರೂ ಸಹ ನೂತನ ಸಿಎಂ, ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿ, ಜೈಪಾಲ್ರೆಡ್ಡಿಗೆ ಶ್ರದ್ಧಾಂಜಲಿ ಅರ್ಪಿಸಿದರು.