
ಬೆಂಗಳೂರು, ಜು.29-ಶಾಸಕರನ್ನು ಅನರ್ಹಗೊಳಿಸಿ ನೀಡಿರುವ ತೀರ್ಪು ಐತಿಹಾಸಿಕವಾದುದು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ಅವರನ್ನು ವಿಧಾನಸಭೆಯಲ್ಲಿ ಅಭಿನಂದಿಸಿದರು.
ಪ್ರಜಾಪ್ರಭುತ್ವ ಮೌಲ್ಯವನ್ನು ಎತ್ತಿಹಿಡಿಯುವ ಐತಿಹಾಸಿಕ ತೀರ್ಪು ಕೊಟ್ಟಿದ್ದೀರಿ. ಪಕ್ಷಾಂತರ ನಿಷೇಧ ಕಾಯ್ದೆಯ ಆಶಯ ನೆರವೇರಿದಂತಾಗಿದೆ. ಜನರ ಹಾಗೂ ಪಕ್ಷದ ಪರವಾಗಿ ಅಭಿನಂದಿಸುವುದಾಗಿ ಹೇಳಿದರು.