ರಾಯ್ಪುರ್, ಜು.29-ಛತ್ತೀಸ್ಗಢದ ಸುಕ್ಮಾ ಜಿಲ್ಲೆಯ ಅರಣ್ಯದಲ್ಲಿ ಇಂದು ಮುಂಜಾನೆ ಭದ್ರತಾ ಪಡೆಗಳ ಜತೆ ನಡೆದ ಗುಂಡಿನ ಕಾಳಗದಲ್ಲಿ ಮಹಿಳೆ ಸೇರಿದಂತೆ ಇಬ್ಬರು ನಕ್ಸಲರು ಹತರಾಗಿದ್ದಾರೆ.
ಕೊಂಟಾ ಪೊಲೀಸ್ಠಾಣೆ ವ್ಯಾಪ್ತಿಯ ಕನೈಗುಡಾ ಗ್ರಾಮದ ಬಳಿ ಅಡವಿಯಲ್ಲಿ ಇಂದು ಬೆಳಗ್ಗೆ 7 ಗಂಟೆಯಲ್ಲಿ ಈ ಗುಂಡಿನ ಕಾಳಗ ನಡೆಯಿತು ಎಂದು ಪೊಲೀಸ್ ಉನ್ನತಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಿಲ್ಲಾ ಮೀಸಲು ರಕ್ಷಕರ ದಳ (ಡಿಆರ್ಜಿ) ಸಿಬ್ಬಂದಿ ಕಾನನದಲ್ಲಿ ಮಾವೋವಾದಿಗಳಿಗಾಗಿ ಶೋಧ ನಡೆಸುತ್ತಿದ್ದರು. ಯೋಧರು ತಮ್ಮ ಬಳಿ ಬರುತ್ತಿದ್ದಂತೆ ನಕ್ಸಲರು ಮರೆಯಿಂದ ಗುಂಡಿನ ದಾಳಿ ನಡೆಸಿದರು. ಭದ್ರತಾ ಪಡೆಗಳು ಪ್ರತಿ ದಾಳಿ ನಡೆಸಿದಾಗ ಗುಂಡಿನ ಚಕಮಕಿ ನಡೆಯಿತು ಎಂದು ಉಪ ಪೆÇಲೀಸ್ ಮಹಾ ನಿರೀಕ್ಷಕ (ನಕ್ಸಲ್ ನಿಗ್ರಹ ಕಾರ್ಯಾಚರಣೆಗಳು) ಪಿ.ಸುಂದರ್ರಾಜ್ ತಿಳಿಸಿದ್ದಾರೆ.
ಎನ್ಕೌಂಟರ್ನಲ್ಲಿ ಓರ್ವ ಮಹಿಳೆ ಸೇರಿದಂತೆ ಇಬ್ಬರು ನಕ್ಸಲರು ಹತಗಾಗಿದ್ದು, ಮೃತರ ಬಳಿ ಇದ್ದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.