ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವಿಗೆ ಆ. 8ರಂದು ಭಾರತ ರತ್ನ ಪ್ರದಾನ

ನವದೆಹಲಿ, ಜು. 29- ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಆ. 8ರಂದು ದೇಶದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನ ಪ್ರದಾನ ಮಾಡಲಾಗುವುದು.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮುಖರ್ಜಿಗೆ ಭಾರತ ರತ್ನ ಪ್ರದಾನ ಮಾಡಲಿದ್ದಾರೆ.

ಮರಣೋತ್ತರವಾಗಿ ಸಾಮಾಜಿಕ ಹೋರಾಟಗಾರ ನಾನಾಜಿ ದೇಶ್ ಮುಖ್ ಹಾಗೂ ಗಾಯಕ ಭೂಪೇನ್ ಹಜಾರಿಕಾ ಅವರಿಗೆ ಅಂದೇ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

2012ರಿಂದ 2017ರವರೆಗೂ ರಾಷ್ಟ್ರಪತಿಯಾಗಿ ಕಾರ್ಯನಿರ್ವಹಿಸಿದ ಪ್ರಣಬ್ ಮುಖರ್ಜಿ, ಪ್ರಣಬ್ ದಾದಾ ಎಂದು ಖ್ಯಾತರಾಗಿದ್ದಾರೆ. 83 ವರ್ಷದ ಪ್ರಣಬ್ ಮುಖರ್ಜಿ, ಕಾಂಗ್ರೆಸ್ ಪಕ್ಷದ ಸರ್ವಶ್ರೇಷ್ಠ ವ್ಯಕ್ತಿಯಾಗಿಯೂ ಹೆಸರಾಗಿದ್ದಾರೆ.

ಸರ್ವಪಲ್ಲಿ ರಾಧಾಕೃಷ್ಣನ್, ರಾಜೇಂದ್ರ ಪ್ರಸಾದ್, ಜಾಕೀರ್ ಹುಸೇನ್ ಮತ್ತು ವಿವಿ ಗಿರಿ ನಂತರ ಭಾರತ ರತ್ನ ಪ್ರಶಸ್ತಿ ಪಡೆದ ಮಾಜಿ ರಾಷ್ಟ್ರಪತಿಗಳ ಸಾಲಿನಲ್ಲಿ ಇದೀಗ ಪ್ರಣಬ್ ಮುಖರ್ಜಿಯೂ ಸೇರುತ್ತಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ