ಸಿದ್ದಾರ್ಥ್ ಅವರ ಸಾವಿನ ಪ್ರಕರಣದ ತನಿಖೆ-ತನಿಖಾಧಿಕಾರಿಯಾಗಿ ಎಸಿಪಿ ನೇಮಕ

ಬೆಂಗಳೂರು, ಜು.31- ಉದ್ಯಮಿ ಸಿದ್ದಾರ್ಥ್ ಅವರ ಸಾವಿನ ಪ್ರಕರಣದ ತನಿಖೆಗೆ ಮಂಗಳೂರು ನಗರ ದಕ್ಷಿಣ ಉಪವಿಭಾಗದ ಎಸಿಪಿ ಅವರನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಎಸಿಪಿ ಅವರು ನಿನ್ನೆಯಿಂದಲೇ ತನಿಖೆ ಆರಂಭಿಸಿದ್ದಾರೆ. ಸಿದ್ದಾರ್ಥ್ ಅವರ ಸಾವಿಗೆ ಕಾರಣವೇನು? ಅದರ ಹಿನ್ನೆಲೆ ಏನಿದೆ? ಅವರು ಮಂಗಳೂರಿನ ನೇತ್ರಾವತಿ ಸೇತುವೆ ಬಳಿ ಏಕೆ ಬಂದರು ಎಂಬಿತ್ಯಾದಿ ಅಂಶಗಳ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

ಸಿದ್ದಾರ್ಥ್ ಅವರ ಸಾವಿಗೆ ಆರ್ಥಿಕ ಸಂಕಷ್ಟ ಹಾಗೂ ಸಾಲವೇ ಕಾರಣ ಎನ್ನಲಾಗುತ್ತಿದೆ. ಆದರೂ ಪೊಲೀಸರು ವಿವಿಧ ದೃಷ್ಟಿಕೋನಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಸಾವಿಗೂ ಮುನ್ನ ಸಂಸ್ಥೆಯ ನಿರ್ದೇಶಕರಿಗೆ ಹಾಗೂ ಕೆಫಿ ಕಾಫಿ ಡೇ ಸಿಬ್ಬಂದಿಗೆ ಬರೆದಿದ್ದಾರೆ ಎನ್ನಲಾದ ಪತ್ರದ ಬಗ್ಗೆಯೂ ತನಿಖೆ ಕೈಗೊಂಡಿದ್ದಾರೆ.

ಸಿದ್ದಾರ್ಥ್ ಅವರ ಮರಣೋತ್ತರ ಪರೀಕ್ಷೆಯ ಅಂತಿಮ ವರದಿ ಬಂದ ನಂತರ ಹಾಗೂ ತನಿಖೆ ಪೂರ್ಣಗೊಂಡ ನಂತರವಷ್ಟೇ ಅವರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ