ದುಷ್ಕರ್ಮಿಗಳಿಂದ ಕಾಂಗ್ರೇಸ್ ನಾಯಕನ ಹತ್ಯೆ

ತ್ರಿಶೂರ್, ಜು.31- ರಾಜಕೀಯ ಕಗ್ಗೊಲೆಗಳಿಂದ ಕುಖ್ಯಾತಿ ಪಡೆಯುತ್ತಿರುವ ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರೊಬ್ಬರನ್ನು 18 ಜನ ಶಸ್ತ್ರ ಸಜ್ಜಿತ ದುಷ್ಕರ್ಮಿಗಳು ಕೊಚ್ಚಿ ಹಾಕಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಚವಕ್ಕಂಡ್‍ನ ಪುನ್ನಾ ಪ್ರದೇಶದಲ್ಲಿ ನಿನ್ನೆ ರಾತ್ರಿ ಈ ದುರ್ಘಟನೆ ನಡೆದಿದೆ. ಹಂತಕರ ದಾಳಿಗೆ ಸ್ಥಳೀಯ ಕಾಂಗ್ರೆಸ್ ನಾಯಕ ನೌಷದ್ ಹತರಾಗಿದ್ದಾರೆ. ಈ ಘರ್ಷಣೆಯಲ್ಲಿ ಇನ್ನೂ ನಾಲ್ವರು ಗಾಯಗೊಂಡಿದ್ದಾರೆ.

ಮೋಟಾರ್ ಬೈಕ್‍ನಲ್ಲಿ ಬಂದ ಮುಸುಕುಧಾರಿ ಹಂತಕರು ಮಾರಕಾಸ್ತ್ರಗಳಿಂದ ನೌಷದ್ ಅವರ ಮೇಲೆ ಭೀಕರ ಹಲ್ಲೆ ನಡೆಸಿ, ಕೊಚ್ಚಿ ಕೊಲೆ ಮಾಡಿದ್ದಾರೆ.

ಸೋಷಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕಾರ್ಯಕರ್ತರು ಈ ಹತ್ಯೆಯಲ್ಲಿ ಶಾಮೀಲಾಗಿರುವ ಶಂಕೆಯಿದೆ. ಈ ಹತ್ಯೆಯನ್ನು ಕಾಂಗ್ರೆಸ್ ಮುಖಂಡ ರಮೇಶ್ ಚಿಣ್ಣಿತ್ತಾಲ ಖಂಡಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ