ಪಾಕಿಸ್ತಾನದ ಪುಂಡಾಟಕ್ಕೆ ಭಾರತೀಯ ಯೋಧರ ದಿಟ್ಟ ಪ್ರತ್ಯುತ್ತರ

ಜಮ್ಮು, ಜು.31-ಕಣಿವೆ ರಾಜ್ಯ ಕಾಶ್ಮೀರದ ಗಡಿ ಭಾಗದಲ್ಲಿ ಪಾಕಿಸ್ತಾನದ ಪುಂಡಾಟಕ್ಕೆ ಭಾರತೀಯ ಯೋಧರ ಇಂದು ದಿಟ್ಟ ಪ್ರತ್ಯುತ್ತರ ನೀಡಿದ್ದಾರೆ. ಸೇನಾ ಪಡೆ ನೀಡಿದ ತಿರುಗೇಟಿನಿಂದ ಪಾಕಿಸ್ತಾನಿ ಸೇನಾ ನೆಲೆಗಳಿಗೆ ಭಾರೀ ಹಾನಿಯಾಗಿದೆ.

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್‍ಒಸಿ) ಉದ್ದಕ್ಕೂ ಪಾಕಿಸ್ತಾನಿ ಸೇನಾ ಪಡೆಗಳು ಇಂದು ಗುಂಡಿನ ದಾಳಿಯೊಂದಿಗೆ ಶೆಲ್‍ಗಳನ್ನು ಉಡಾಯಿಸಿದವು.

ಕದನ ವಿರಾಮ ಇಲ್ಲಂಘಿಸಿ ಪಾಕಿಸ್ತಾನ ನಡೆಸಿದ ಅಪ್ರಚೋದಿತ ದಾಳಿಯಲ್ಲಿ ಕೆಲವರಿಗೆ ಗಾಯಗಳಾಗಿವೆ.

ಪಾಕಿಸ್ತಾನದ ಉದ್ಧಟತನಕ್ಕೆ ಭಾರತೀಯ ಸೇನಾ ಪಡೆಗಳು ದಿಟ್ಟ ಪ್ರತ್ಯುತ್ತರ ನೀಡಿವೆ. ತತ್ಪರಿಣಾಮವಾಗಿ ಪಾಕ್ ಸೇನೆ ನೆಲೆಗಳಿಗೆ ಭಾರೀ ಹಾನಿಯಾಗಿದ್ದು, ಸಾವು-ನೋವು ಉಂಟಾಗಿದೆ ಎಂದು ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.

12,30ರ ನಸುಕಿನಿಂದ ಪಾಕಿಸ್ತಾನ ಸೇನೆ ರಜೌರಿ ಜಿಲ್ಲೆಯ ನೌಶೇರಾ ವಲಯದ ಎಲ್‍ಒಸಿಯುದ್ದಕ್ಕೂ ಸಣ್ಣ ಶಸ್ತ್ರಾಸ್ತ್ರಗಳಿಂದ ಗುಂಡಿನ ದಾಳಿ ಜೊತೆ ಮಾರ್ಟಾರ್‍ಗಳನ್ನು ಉಡಾಯಿಸಿದವು. ಇದಕ್ಕೆ ಭಾರತೀಯ ಯೋಧರು ಪರಿಣಾಮಕಾರಿಯಾಗಿ ಪ್ರತಿ ದಾಳಿ ನಡೆಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಕಣಿವೆ ರಾಜ್ಯದ ಪೂಂಚ್ ಮತ್ತು ರಜೌರಿ ಜಿಲ್ಲೆಯ ಗಡಿ ಭಾಗಗಳಲ್ಲಿ ಸೇನಾ ನೆಲೆಗಳು ಮತ್ತು ಗ್ರಾಮಗಳನ್ನು ಗುರಿಯಾಗಿಟ್ಟುಕೊಂಡು ಪಾಕಿಸ್ತಾನ ಸತತ ನಾಲ್ಕನೇ ದಿನದಿಂದ ಅಪ್ರಚೋದಿತ ದಾಳಿ ನಡೆಸುತ್ತಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ