ಕನ್ನಡಿಗರಾಗಿ ಸಾವಿರಾರು ಮಂದಿಗೆ ಉದ್ಯೋಗವನ್ನು ನೀಡಿದ್ದರು-ಮಾಜಿ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಜು.31-ಕಾಫಿ ಡೇ ಮಾಲೀಕ ವಿ.ಜಿ.ಸಿದ್ದಾರ್ಥ್ ನಮ್ಮ ರಾಜ್ಯದ ಆಸ್ತಿಯಾಗಿದ್ದರು. ಅವರ ಸಾವನ್ನು ನಂಬಲಾಗುತ್ತಿಲ್ಲ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿಂದು ಎಸ್.ಎಂ.ಕೃಷ್ಣ ಮನೆಗೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡಿಗರಾಗಿ ಸಾವಿರಾರು ಮಂದಿಗೆ ಉದ್ಯೋಗವನ್ನು ನೀಡಿದ್ದರು. ವಿಶ್ವಾಸದಿಂದ ಜನರನ್ನು ನೋಡಿಕೊಳ್ಳುತ್ತಿದ್ದ ವ್ಯಕ್ತಿ ಇಂದು ಇಲ್ಲವಾಗಿದ್ದಾರೆ ಎಂದರೆ ನಂಬಲಾಗುತ್ತಿಲ್ಲ. ಅವರ ಕುಟುಂಬಸ್ಥರಿಗೆ, ಸಂಸ್ಥೆಯ ಸಿಬ್ಬಂದಿಗೆ ಹಾಗೂ ಅವರ ಆಪ್ತರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಅವರು ಹೇಳಿದ್ದಾರೆ.

ಆದಾಯ ತೆರಿಗೆ ಇಲಾಖೆ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಕೆಲವರಿಗೆ ಮಾತನಾಡುವ ಅರ್ಜೆಂಟ್ ಇದೆ. ಅವರು ಮಾತನಾಡಿಕೊಳ್ಳಲಿ, ಸಾವಿಗೆ ಕಾರಣಗಳೇನು, ಅದಕ್ಕೆ ಹೊಣೆ ಯಾರು ಎಂಬ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ ಎಂದು ಅವರು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ