ಬೆಂಗಳೂರು, ಜು.31- ಮಾಜಿ ಸಚಿವ, ಶಾಸಕ ಜಮೀರ್ ಅಹಮ್ಮದ್ ಖಾನ್ ಅವರು ಇಂದು ಎಸ್‍ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಡಿಸಿಪಿ ಗಿರೀಶ್ ಅವರು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮೀರ್ ಅಹಮ್ಮದ್ ಖಾನ್ ಅವರಿಗೆ ಎಸ್‍ಐಟಿ ಮುಂದೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಆ ಹಿನ್ನೆಲೆಯಲ್ಲಿ ಇಂದು ಅವರು ಹಾಜರಾಗಿದ್ದರು ಎಂದು ತಿಳಿಸಿದರು.
ವಿಚಾರಣೆ ಸಂದರ್ಭದಲ್ಲಿ ಎಸ್‍ಐಟಿ ಅಧಿಕಾರಿಗಳು ಕೇಳಲಾದ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ ಎಂದು ತಿಳಿದುಬಂದಿದೆ.