ಆ.11ರಂದು ಶ್ರೀ ಜಯಚಾಮರಾಜ ಒಡೆಯರ್‍ರವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ

ಬೆಂಗಳೂರು, ಆ.1- ವಾಗ್ಗೇಯಕಾರ ಹಾಗೂ ಮೈಸೂರು ಸಂಸ್ಥಾನದ ಮನ್ಮಹರಾಜ ಬಹದ್ದೂರ್ ಶ್ರೀ ಜಯಚಾಮರಾಜ ಒಡೆಯರ್ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮವು ಇದೇ 11ರಂದು ಬೆಳಗ್ಗೆ 10 ಗಂಟೆಗೆ ವಸಂತ ನಗರದಲ್ಲಿನ ಅರಸು ಅಸೋಸಿಯೇಷನ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಅರಸು ಅಸೋಸಿಯೇಷನ್ ವತಿಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದೇ ವೇಳೆ ಕ್ರೀಡಾ ಮತ್ತು ಸಾಂಸ್ಕø ತಿಕ ಚಟುವಟಿಕೆಗಳ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಗುವುದು.

ಆರ್.ರಾಜಾಚಂದ್ರ ಅರಸು ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಅಸೋಸಿಯೇಷನ್ ಅಧ್ಯಕ್ಷೆ ಎನ್.ಭಾರತಿ ಅರಸು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಹಂಪಿ ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ವಿಭಾಗದ ಪ್ರಾಧ್ಯಾಪಕ ಎನ್.ಚನ್ನಸ್ವಾಮಿ ಸೋಸಲೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇದೇ ವೇಳೆ ಸಾಂಸ್ಕøತಿಕ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಯಚಾಮರಾಜ ಒಡೆಯರ್ ಕುರಿತಾದ ಕಿರುಚಿತ್ರ ಪ್ರದರ್ಶನಗೊಳ್ಳಲಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ