![BSY](http://kannada.vartamitra.com/wp-content/uploads/2019/05/BSY-677x381.png)
ಬೆಂಗಳೂರು, ಆ.1- ಸಹಾಯ ಬೇಡಿ ಬಂದ ಅನಾರೋಗ್ಯ ಪೀಡಿತ ಮಹಿಳೆಯೊಬ್ಬರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ನೆರವಾಗಿದ್ದಾರೆ.
ಇಂದು ಬೆಳಿಗ್ಗೆ ವಿಧಾನಸೌಧದಲ್ಲಿ ಸುಶೀಲಮ್ಮ ಎಂಬಾಕೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ತನಗೆ ಹೃದಯ ಸಮಸ್ಯೆಯಿದ್ದು ಚಿಕಿತ್ಸೆಗೆ ಹಣವಿಲ್ಲವೆಂದು ಅವಲತ್ತುಕೊಂಡಿದ್ದಾರೆ.
ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸಂಜೆಯೊಳಗೆ ಈಕೆಗೆ ಒಂದು ಲಕ್ಷ ರೂಪಾಯಿ ಬಿಡುಗಡೆ ಮಾಡುವಂತೆ ಆದೇಶಿಸಿದ್ದಾರೆ.