ನವದೆಹಲಿ, ಆ.1– ಅಯೋಧ್ಯೆಯಲ್ಲಿನ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಎಫ್.ಎಂ.ಐ.ಖಲೀಫುಲ್ಲಾ ನೇತೃತ್ವದ ತ್ರಿಸದಸ್ಯ ಸಮಿತಿ ಇಂದು ತನ್ನ ಮಧ್ಯಂತರ ವರದಿ ಸಲ್ಲಿಸಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ನೇತೃತ್ವದ ಪಂಚ ನ್ಯಾಯಾಧೀಶರ ಸಾಂವಿಧಾನಿಕ ಪೀಠ ಅದನ್ನು ಪರಿಶೀಲಿಸಿ ಅಗತ್ಯಬಿದ್ದರೆ ಆ.3ರಿಂದ ವಿಚಾರಣೆ ನಡೆಸುವ ಸಾಧ್ಯತೆ ಇದೆ.
ಮೊಹರು ಮಾಡಿದ ಲಕೋಟೆಯಲ್ಲಿ ಸಮಿತಿ ವರದಿ ಸಲ್ಲಿಕೆ ಮಾಡಿದೆ. ಮಾರ್ಚ್ನಲ್ಲಿ ನಡೆದಿದ್ದ ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಅಯೋಧ್ಯೆ-ಬಾಬ್ರಿ ಮಸೀದಿ ಜಮೀನು ವಿವಾದವನ್ನು ಸೌಹಾರ್ದಯುತವಾಗಿ ಇತ್ಯರ್ಥ ಪಡಿಸುವ ನಿಟ್ಟಿನಲ್ಲಿ ನಿವೃತ್ತ ನ್ಯಾಯಮೂರ್ತಿ ಖಲೀಫುಲ್ಲಾ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು.