ಎರಡು ವಾರಗಳ ಕಾಲ ನ್ಯಾಯಾಂಗ ಬಂಧನಕ್ಕೆ ಮನ್ಸೂರ್

ಬೆಂಗಳೂರು, ಆ.1- ಐಎಂಎ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ವಶದಲ್ಲಿದ್ದ ಆರೋಪಿ ಮಹಮ್ಮದ್ ಮನ್ಸೂರ್‍ಖಾನ್‍ನನ್ನು ಎರಡು ವಾರಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮನ್ಸೂರ್‍ಖಾನ್ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ವಿಚಾರಣೆ ನಡೆಸಿದ ಸಿಸಿಎಚ್ ಕೋರ್ಟ್ ಆವರಣದಲ್ಲಿರುವ ಇಡಿ ನ್ಯಾಯಾಲಯ ಮನ್ಸೂರ್‍ಖಾನ್‍ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ