ಅಹಮದಾಬಾದ್: ಭಾರೀ ಮಳೆಗೆ ಗುಜರಾತ್ ನ ವಡೋದರಾ ನಗರ ಸಂಪೂರ್ಣ ಪ್ರವಾಹದ ರೀತಿಯಲ್ಲಿ ನೀರು ನಿಂತ ಪರಿಣಾಮ ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತಗೊಂಡಿದೆ.
ಬುಧವಾರ ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಗುರುವಾರ ವಡೋದರಾದ ತಗ್ಗುಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿರುವುದಾಗಿ ವರದಿ ತಿಳಿಸಿದೆ.
ತಗ್ಗುಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರನ್ನು ರಕ್ಷಿಸುವ ನಿಟ್ಟಿನಲ್ಲಿ ಎನ್ ಡಿಆರ್ ಎಫ್ ತಂಡ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಉನ್ನತ ಮಟ್ಟದ ಸಭೆ ಕರೆದಿದ್ದಾರೆ.
ಮಳೆಯಿಂದಾಗಿ ಐದು ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ಪ್ರಯಾಣಿಕರು ತಮ್ಮ ಪ್ರಯಾಣವನ್ನು ಮುಂದೂಡಬೇಕಾಗಿ ರೈಲ್ವೆ ಅಧಿಕಾರಿಗಳು ವಿನಂತಿಸಿಕೊಂಡಿದ್ದಾರೆ.