ಬೆಂಗಳೂರು,ಆ.2- ರಾಜ್ಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಮೈತ್ರಿ ಸರ್ಕಾರ ಮಾಡಿದ್ದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ನಾಮನಿರ್ದೇಶನವನ್ನು ರದ್ದುಪಡಿಸಲಾಗಿದೆ.
ಮೈತ್ರಿ ಸರ್ಕಾರದ ಅವಧಿಯಲ್ಲಿ ನೇಮಕಗೊಂಡಿದ್ದ ವಿವಿಧ ಮಂಡಳಿಗಳ ಅಧ್ಯಕ್ಷರು, ವಿವಿಧ ಅಕಾಡೆಮಿಗಳ ಅಧ್ಯಕ್ಷರ ನಾಮನಿರ್ದೇಶನವನ್ನು ರಾಜ್ಯ ಸರ್ಕಾರ ಈಗಾಗಲೇ ರದ್ದುಪಡಿಸಿದೆ.
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಸರ್ಕಾರದಿಂದ ಮಾಡಲಾಗಿದ್ದ ಸದಸ್ಯರ ನಾಮನಿರ್ದೇಶನವನ್ನು ರದ್ದುಪಡಿಸಿದೆ ಸಹಕಾರ ಇಲಾಖೆ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಒಂದು ವಾರದ ಹಿಂದಷ್ಟೇ ಅಧಿಕಾರಕ್ಕೆ ಬಂದಿದ್ದು, ಮೈತ್ರಿ ಸರ್ಕಾರದ ರಾಜಕೀಯ ನೇಮಕಾತಿಗಳನ್ನು ರದ್ದುಪಡಿಸಿದೆ. ಹೊಸದಾಗಿ ಮತ್ತೆ ವಿವಿಧ ನಿಗಮ, ಮಂಡಳಿ ಹಾಗೂ ಎಪಿಎಂಸಿಗಳಿಗೆ ನಾಮನಿರ್ದೇಶನ ಮಾಡಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿವೆ.