ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಭಯೋತ್ಪಾದಕರು ಸೇನಾ ವಾಹನವನ್ನು ಟಾರ್ಗೆಟ್ ಮಾಡಿ ಐಇಡಿ ಸ್ಫೋಟಿಸಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ಜಾಹಿದ್ಬಾಗ್ ಗ್ರಾಮದಲ್ಲಿರುವ 55 ರಾಷ್ಟ್ರೀಯ ರೈಫಲ್ಸ್ (ಆರ್ಆರ್) ವಾಹನವನ್ನು ಗುರಿಯಾಗಿಸಿಕೊಂಡು ಉಗ್ರರು ಈ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ದಾಳಿಯ ಬಳಿಕ, ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರೆದು ಭಯೋತ್ಪಾದಕರ ಶೋಧ ಕಾರ್ಯಾಚರಣೆ ಆರಂಭಿಸಿವೆ.
ಫೆಬ್ರವರಿ 14 ರಂದು ಜಿಲ್ಲೆಯ ಸಿಆರ್ಪಿಎಫ್ ಬೆಂಗಾವಲು ಪಡೆಯ ಮೇಲೆ ಭಯೋತ್ಪಾದಕರು ನಡೆಸಿದ್ದ ಭೀಕರ ಬಾಂಬ್ ದಾಳಿಯಲ್ಲಿ ಸುಮಾರು 40 ಯೋಧರು ಹುತಾತ್ಮರಾಗಿದ್ದರು